ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಹಿಂದಿಯನ್ನು ಹೇರಿಕೆ ಮಾಡುವುದಿಲ್ಲ ಎಂದು ತಿಳಿಸಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಯಾವುದೇ ರಾಜ್ಯದ ಮೇಲೆ ಭಾಷೆಯನ್ನು ಹೇರಿಕೆ ಮಾಡುವುದಿಲ್ಲ. ಎಲ್ಲ ಭಾಷೆಗಳನ್ನು ನಾವು ಪ್ರೋತ್ಸಾಹಿಸುತ್ತೇವೆ. ಸಾರ್ವಜನಿಕರ ಅಭಿಪ್ರಾಯವನ್ನು ಸಿದ್ಧಪಡಿಸಿ ನೀತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
It’s a misconception that a new education policy has been put in place. The ministry has only received a draft report that will be sought for public feedback. PM Modi has clearly stated in the past that no language will be imposed on any state. pic.twitter.com/8ZBgxkBJEO
— Dr Ramesh Pokhriyal Nishank (@DrRPNishank) June 1, 2019
Advertisement
ಕೇಂದ್ರ ಸರ್ಕಾರಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಂತೆ ಮಾಜಿ ಇಸ್ರೋ ಮುಖ್ಯಸ್ಥ ಡಾ. ಕಸ್ತೂರಿ ರಂಗನ್ ಅವರು ಸಮಿತಿ ತನ್ನ ವರದಿಯ ಡ್ರಾಫ್ಟ್ ಅನ್ನು ಮೇ 31 ರಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಕೆ ಮಾಡಿತ್ತು.
Advertisement
ದೇಶದ ಶಿಕ್ಷಣ ವ್ಯವಸ್ಥೆ ಅಗತ್ಯವಿರುವ ಬದಲಾವಣೆಗಳನ್ನು ಕೈಗೊಳ್ಳಲು ಸಮಿತಿ ತನ್ನ ವರದಿಯಲ್ಲಿ ಪ್ರಸ್ತಾಪ ಮಾಡಿದೆ. ವರದಿ ಸಲ್ಲಿಕೆಯಾದ ಬೆನ್ನಲ್ಲೇ ವಿವಾದವೂ ಹುಟ್ಟಿಕೊಂಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2019ರ ಕರಡನ್ನು ಅನ್ನು ಸಚಿವಾಲಯ ತನ್ನ ಅಧಿಕೃತ ವೆಬ್‍ಸೈಟ್ ಪ್ರಕಟ ಮಾಡಿತ್ತು. ಸದ್ಯ ಪ್ರಾದೇಶಿಕ ಭಾಷಾ ಪ್ರಾಬಲ್ಯವಿರುವ ರಾಜ್ಯಗಳಲ್ಲಿ ವರದಿಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
Advertisement
The National Education Policy as submitted to the Minister HRD is only a draft report. Feedback shall be obtained from general public. State Governments will be consulted. Only after this the draft report will be finalised. GoI respects all languages. No language will be imposed
— Dr. S. Jaishankar (@DrSJaishankar) June 2, 2019
ಶಿಫಾರಸ್ಸು ಏನು?
ಕಸ್ತೂರಿ ರಂಗನ್ ಅವರ ರಾಷ್ಟ್ರೀಯ ಶಿಕ್ಷಣ ನೀತಿ ವರದಿಯಲ್ಲಿ ದೇಶದಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವೇಳೆ ಮಕ್ಕಳಿಗೆ ಕಡ್ಡಾಯವಾಗಿ 2 ಭಾಷೆ ಕಲಿಯಬೇಕು ಎಂಬ ನಿಯಮವನ್ನು ವಿಧಿಸಲಾಗಿದೆ. ಇದು ತ್ರಿಭಾಷಾ ಸೂತ್ರದಡಿ ಈ ನಿಯಮವನ್ನು ರಚಿಸಲಾಗಿದ್ದು, ಇಂಗ್ಲಿಷ್, ಹಿಂದಿ ಭಾಷೆಗಳನ್ನು ಕಡ್ಡಾಯಗೊಳಿಸಲಾಗಿದೆ. ಹಿಂದಿಯೇತರ ರಾಜ್ಯಗಳಲ್ಲಿ ಪ್ರಮುಖವಾಗಿ ಪ್ರಾದೇಶಿಕ ಭಾಷೆಯಾಗಿ ಐಚ್ಛಿಕವಾಗಿ ಕಲಿಯಬಹುದು ಎಂದು ಶಿಫಾರಸು ಮಾಡಿದೆ.
ಏನಿದು ತ್ರಿಭಾಷಾ ಸೂತ್ರ?
1968 ರಲ್ಲಿ ಜಾರಿಗೆ ಮಾಡಲಾಗಿದ್ದ ತ್ರಿಭಾಷಾ ಸೂತ್ರದ ಅನ್ವಯ ಹಿಂದಿ ಭಾಷೆ ಮಾತನಾಡುವ ರಾಜ್ಯಗಳಲ್ಲಿ ಹಿಂದಿ, ಇಂಗ್ಲಿಷ್ ಮತ್ತು ಒಂದು ಭಾರತೀಯ ಭಾಷೆ (ದಕ್ಷಿಣ ಭಾಷೆಗಳಲ್ಲಿ) ಕಲಿಕೆ. ಹಿಂದಿ ಮಾತನಾಡದ ರಾಜ್ಯಗಳಲ್ಲಿ ಹಿಂದಿ, ಇಂಗ್ಲಿಷ್ ಮತ್ತು ಆಯಾ ಪ್ರಾದೇಶಿಕ ಭಾಷೆ ಕಲಿಸಬೇಕಿತ್ತು.
மக்கள் கருத்துக்களை கேட்டறிந்த பின்பே கல்வி குழுவின் வரைவு அறிக்கை அமல்படுத்தப்படும். பிரதமர் அனைத்து இந்திய மொழிகளையும் வளர்க்க விரும்பியே “ஒரே பாரதம் உன்னத பாரதம்” “#EkBharatSreshthaBharat முயற்சியை துவக்கினார். தொன்மையான தமிழை போற்றி வளர்பதற்கு மத்ய அரசு முன்னின்று ஆதரிக்கும்.
— Nirmala Sitharaman (@nsitharaman) June 2, 2019
ಈ ನೀತಿ ಜಾರಿಗೆ ಆಗಿದ್ದರೂ ಕೂಡ ತ್ರಿಭಾಷಾ ನೀತಿ ಯಶಸ್ವಿಯಾಗಿಲ್ಲ. ಏಕೆಂದರೆ ಭಾಷಾ ಶಿಕ್ಷಕರ ಕೊರತೆ ಹಾಗೂ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಕಲಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಂದಿನ ತಮಿಳು ನಾಡು ಸರ್ಕಾರ ತ್ರಿಭಾಷಾ ನೀತಿಯನ್ನ ತಿರಸ್ಕರಿಸಿ ದ್ವಿಭಾಷಾ ನೀತಿಯನ್ನೇ ಅಳವಡಿಸಿಕೊಂಡಿತ್ತು.
ಕೇಂದ್ರದ ಸ್ಪಷ್ಟನೆ: ಹಿಂದಿ ಭಾಷೆಯ ಕಲಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಅನ್ವಯ ಹಿಂದಿ ಭಾಷೆ ಆಯಾ ವಿದ್ಯಾರ್ಥಿಯ ಆಯ್ಕೆಯಾಗಿದೆ ಎಂದು ತಿಳಿಸಿದೆ. ಅಲ್ಲದೇ ಕರಡನ್ನು ಬದಲಾಯಿಸಿರುವ ಕೇಂದ್ರ ಸರ್ಕಾರ ಹಿಂದಿ ಐಚ್ಛಿಕ ಭಾಷೆಯಾಗಿ ಕಲಿಸಿದರೆ ಸಾಕು ಎಂದು ತಿಳಿಸಿದೆ.
ನಮ್ಮ ನಿಲುವು ಸ್ಪಷ್ಟ ಮತ್ತು ಅಚಲ ಕರ್ನಾಟಕದಲ್ಲಿ ಕನ್ನಡಕ್ಕೆ ಆದ್ಯತೆ . Letter is self explanatory pic.twitter.com/wPaNi9R2ma
— Sadananda Gowda (@DVSadanandGowda) June 3, 2019
ವಿರೋಧ ಏಕೆ?
ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಹಿಂದಿ ಕಲಿಕೆ ಕಡ್ಡಾಯ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದಂತೆ ಈ ಬಗ್ಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಿಂದಿಯನ್ನು ಬಲವಂತವಾಗಿ ಹಿಂದಿಯೇತರ ರಾಜ್ಯಗಳ ಮೇಲೆ ಹಾಕಲಾಗುತ್ತಿದೆ ಎಂದು ಆರೋಪಿಸಿ ವಿರೋಧಿಸಿ ಅಭಿಯಾನವನ್ನು ನಡೆಸಲಾಗಿತ್ತು. ಸದ್ಯ ಕೇಂದ್ರ ವಿವಾದ ಅಂಶವುಳ್ಳ ಸಂಗತಿಯನ್ನ ಡ್ರಾಫ್ಟ್‍ನಿಂದ ತೆಗೆದು ಹಾಕಿ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಅವರು ಸ್ಪಷ್ಟನೆ ನೀಡಿ, ಯಾವುದೇ ಕಾರಣಕ್ಕೂ ಸ್ಥಳೀಯ ಭಾಷೆಗಳನ್ನು ಕಡೆಗಣಿಸುವಂತಿಲ್ಲ. ಭಾರತದ ಅಖಂಡತೆ, ವೈವಿಧ್ಯತೆ ಕಾಪಾಡಲು ಕೇಂದ್ರ ಸರ್ಕಾರ ಬದ್ಧ ಎಂದಿದ್ದಾರೆ.
ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ.
— Siddaramaiah (@siddaramaiah) June 3, 2019
ನಿನ್ನೆ @HRDMinistry ರವರು ಹೊರಡಿಸಿದ ಶಿಕ್ಷಣ ಕರಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ.
3-ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು.
ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು.#HindiImposition
— CM of Karnataka (@CMofKarnataka) June 2, 2019