ರಾಷ್ಟ್ರಪತಿ ಮುರ್ಮು ಅವರಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

Public TV
1 Min Read
National Award 1

ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ  (National Award) ಪ್ರಶಸ್ತಿ ಪ್ರದಾನ ಸಮಾರಂಭವು ಇಂದು ದೆಹಲಿಯಲ್ಲಿ ನಡೆಯಿತು. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ, ನಟಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ರಾಷ್ಟ್ರಪತಿಗಳಾದ ದ್ರೌಪತಿ ಮುರ್ಮು ಅವರು ಪ್ರದಾನ ಮಾಡಿದರು.

National Award 2

ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ರಕ್ಷಿತ್ ಶೆಟ್ಟಿ (Rakshit Shetty) ನಟನೆಯ, ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777  (Charlie 777) ಚಿತ್ರಕ್ಕೆ ದೊರೆತಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ (Bale bangara) ಪ್ರಶಸ್ತಿ ಪಡೆದಿದೆ.

National Award 3

ಸಿನಿಮಾ ಪತ್ರಕರ್ತರಿಗೆ ನೀಡುವ ‘ಅತ್ಯುತ್ತಮ ಸಿನಿಮಾ ವಿಮರ್ಶಕ (ಸ್ಪೆಷಲ್ ಮೆನ್ಷನ್ ಕ್ರಿಟಿಕ್) ಪ್ರಶಸ್ತಿಯು ಹಿರಿಯ ಸಿನಿಮಾ ಪತ್ರಕರ್ತ ಸುಬ್ರಮಣ್ಯ ಬಾಡೂರು (Subramanya Badoor) ಅವರಿಗೆ ದೊರೆತಿದೆ. ಇವರೆಲ್ಲರೂ ಇಂದು ಉಪಸ್ಥಿತರಿದ್ದು ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ (Cinema) ಪ್ರಶಸ್ತಿಯನ್ನು ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. 2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡಿ, ಪ್ರದಾನ ಮಾಡಿದೆ.

Web Stories

Share This Article