ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ (National Award) ಪ್ರಶಸ್ತಿ ಘೋಷಣೆಯಾಗಿವೆ. ಸಿನಿಮಾ ಪತ್ರಕರ್ತರಿಗೆ ನೀಡುವ ‘ಅತ್ಯುತ್ತಮ ಸಿನಿಮಾ ವಿಮರ್ಶಕ (ಸ್ಪೆಷಲ್ ಮೆನ್ಷನ್ ಕ್ರಿಟಿಕ್) ಪ್ರಶಸ್ತಿಯು ಕನ್ನಡದ ಚಲನಚಿತ್ರ ಪತ್ರಕರ್ತರ ಪಾಲಾಗಿದೆ. ಹಿರಿಯ ಸಿನಿಮಾ ಪತ್ರಕರ್ತ ಸುಬ್ರಮಣ್ಯ ಬಾಡೂರು (Subramanya Badoor) ಅವರಿಗೆ ದೊರೆತಿದೆ. ಕನ್ನಡ ಸಿನಿಮಾ ರಂಗಕ್ಕೆ ಬಾ.ನಾ.ಸುಬ್ರಮಣ್ಯ ಎಂದೇ ಖ್ಯಾತರಾಗಿರುವ ಅವರು ಹಲವು ದಶಕಗಳಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
Advertisement
ಈ ಹಿಂದೆ ಎರಡು ಬಾರಿ ಸ್ಪೆಷಲ್ ಮೆನ್ಷನ್ ಕ್ರಿಟಿಕ್ ಪ್ರಶಸ್ತಿಯು ಕನ್ನಡಿಗರ ಪಾಲಾಗಿತ್ತು, ಬ್ಯಾಂಕ್ ಉದ್ಯೋಗಿಯಾಗಿದ್ದ ಎನ್.ಕೆ ರಾಘವೇಂದ್ರ, ಉಪನ್ಯಾಸಕರಾಗಿದ್ದ ಮನು ಚಕ್ರವರ್ತಿ ಅವರು ಈ ಹಿಂದೆ ಇದೇ ಪ್ರಶಸ್ತಿಯನ್ನು ಪಡೆದಿದ್ದಾರೆ. ಆದರೆ, ಪತ್ರಿಕೋದ್ಯಮದಲ್ಲೇ ಹಲವು ದಶಕಗಳ ಕಾಲ ಕೆಲಸ ಮಾಡಿದ ಪತ್ರಕರ್ತರಿಗೆ ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ಸಂದಿದೆ.
Advertisement
Advertisement
2021ನೇ ಸಾಲಿ ಅತ್ಯುತ್ತಮ ಸಿನಿಮಾ ಮಾಧವನ್ ನಟನೆಯ ‘ ರಾಕೆಟ್- ದಿ ನಂಬಿ ಎಫೆಕ್ಟ್’ ಅತ್ಯುತ್ತಮ ನಟ ಪ್ರಶಸ್ತಿಯು ತೆಲುಗಿನ ಪುಷ್ಪ (Pushpa) ಚಿತ್ರಕ್ಕಾಗಿ ಅಲ್ಲು ಅರ್ಜುನ್ (Allu Arjun) ಪಡೆದುಕೊಂಡಿದ್ದರೆ, ಅತ್ತುತ್ತಮ ನಟಿ ಪ್ರಶಸ್ತಿ ಇಬ್ಬರ ಪಾಲಾಗಿದೆ. ಗಂಗೂಬಾಯಿ ಕಾಟಿಯಾ ಚಿತ್ರಕ್ಕಾಗಿ ಆಲಿಯಾ ಭಟ್ (Alia Bhatt) ಮತ್ತು ಮಿಮಿ ಚಿತ್ರಕ್ಕಾಗಿ ಕೀರ್ತಿ ಸನನ್ (Keerthy Sanan) ಪಡೆದುಕೊಂಡಿದ್ದಾರೆ.
Advertisement
ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ರಕ್ಷಿತ್ ಶೆಟ್ಟಿ (Rakshit Shetty) ನಟನೆಯ, ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777 (Charlie 777) ಚಿತ್ರಕ್ಕೆ ದೊರೆತಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ (Bale bangara ) ಪ್ರಶಸ್ತಿ ಪಡೆದಿದೆ. ಭಾರತದಲ್ಲಿ ತಯಾರಾಗುವ ಅಷ್ಟೂ ಸಿನಿಮಾಗಳೂ ಈ ಸ್ಪರ್ಧೆಗೆ ಸ್ಪರ್ಧಿಸಬಹುದಾಗಿದ್ದು, ಜೊತೆಗೆ ಪ್ರಾದೇಶಿಕ ಸಿನಿಮಾಗಳಿಗೂ ಪ್ರತ್ಯೇಕವಾಗಿ ಪ್ರಶಸ್ತಿಗಳು ಮೀಸಲಿವೆ.
ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ (Cinema) ಪ್ರಶಸ್ತಿಯನ್ನು ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡುತ್ತಿದೆ.
Web Stories