Connect with us

ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

ನವದೆಹಲಿ: 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ‘ರುಸ್ತುಮ್’ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಬಾಲಿವುಡ್ ನಟ ಕುಮಾರ್‍ಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಸಿಕ್ಕಿದೆ.

ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರ ಎರಡು ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು  ಬಾ.ಪು. ಪದ್ಮನಾಭ ಗೆದ್ದುಕೊಂಡರೆ, ಅತ್ಯುತ್ತಮ ಮೇಕಪ್ ಪ್ರಶಸ್ತಿ ಎನ್.ಕೆ.ರಾಮಕೃಷ್ಣನ್  ಅವರಿಗೆ ಸಿಕ್ಕಿದೆ.

ಮಲೆಯಾಳಂ ಭಾಷೆಯಲ್ಲಿರುವ ‘ಮಿನ್ನಮಿನುಗು’ ಚಿತ್ರದ ಅಭಿನಯಕ್ಕಾಗಿ ಸುರಭಿ ಲಕ್ಷ್ಮಿ ಅವರಿಗೆ ಅತ್ಯುತ್ತಮ ನಾಯಕಿ ನಟಿ ಪ್ರಶಸ್ತಿ ಸಿಕ್ಕಿದೆ. ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ‘ರಿಸರ್ವ್‍ವೇಶನ್’ಗೆ ಲಭಿಸಿದ್ದರೆ, ಸೋನಂ ಕಪೂರ್ ಅಭಿನಯದ ‘ನೀರ್ಜಾ’ ಹಿಂದಿಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಮದಿಪುಗೆ ಅತ್ಯುತ್ತಮ ತುಳು ಚಿತ್ರ ಪ್ರಶಸ್ತಿ ಸಿಕ್ಕಿದರೆ, ಅತ್ಯುತ್ತಮ ಕೊಂಕಣಿ ಚಿತ್ರ ಡಿ ಝರಾ ಝರಾಗೆ ಸಿಕ್ಕಿದೆ. ಸಾಮಾಜಿಕ ವಿಭಾಗದಲ್ಲಿ ಅಮಿತಾಬ್ ಬಚ್ಚನ್ ಅಭಿನಯದ ಪಿಂಕು ಚಿತ್ರಕ್ಕೆ ಪ್ರಶಸ್ತಿ ಲಭಿಸಿದೆ.

ದಂಗಲ್ ಚಿತ್ರದ ಅಭಿನಯಕ್ಕಾಗಿ ಜೈರಾ ವಾಸಿಂಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ. ಅಕ್ಷಯ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಸಿನಿ ಉದ್ಯಮಕ್ಕೆ ಸ್ನೇಹ ರಾಜ್ಯ ಪ್ರಶಸ್ತಿಯನ್ನು ಉತ್ತರಪ್ರದೇಶ ಗೆದ್ದುಕೊಂಡಿದೆ.

ನಿರ್ದೇಶಕ, ನಿರ್ಮಾಪಕ ಪ್ರಿಯದರ್ಶನ್ ನೇತೃತ್ವದ ಸಮಿತಿ ಈ ಪ್ರಶಸ್ತಿಗಳನ್ನು ಆಯ್ಕೆ ಮಾಡಿದೆ.

 

Advertisement
Advertisement