ಭೋಪಾಲ್: ಮಧ್ಯಪ್ರದೇಶ ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಅಮೆಜಾನ್ ವಿರುದ್ಧ ಭಾರತೀಯ ಧ್ವಜವಿರುವ ಉತ್ಪನ್ನಗಳನ್ನು ಒದಗಿಸಿರುವುದಾಗಿ ಆರೋಪಿಸಿ ಎಫ್‍ಐಆರ್ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ರಾಷ್ಟ್ರಧ್ವಜಗಳನ್ನು ಮುದ್ರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿರುವ ಆರೋಪದ ಮೇಲೆ ಇ-ಕಾಮರ್ಸ್ ಪ್ಲಾಟ್‍ಫಾರ್ಮ್ ಅಮೆಜಾನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಸರ್ಕಾರ ಪೊಲೀಸರಿಗೆ ಸೂಚಿಸಿದೆ. ಇದನ್ನೂ ಓದಿ: ಕಿಕ್ ಸ್ಟಾರ್ಟ್ ಜೀಪ್ ತಯಾರಿಸಿದ ಬಡ ಪ್ರತಿಭೆಗೆ ಬೊಲೆರೋ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ
Advertisement
Advertisement
ಅಮೆಜಾನ್ ಮಾರಾಟ ಮಾಡುವ ಉತ್ಪನ್ನಗಳ ಮೇಲೆ ರಾಷ್ಟ್ರಧ್ವಜವನ್ನು ಮುದ್ರಿಸಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಅದರಲ್ಲೂ ಶೂಗಳ ಮೇಲೆ ಮುದ್ರಿಸಿರುವುದು ಸಹಿಸಲಸಾಧ್ಯ. ಹೀಗಾಗಿ ಅಮೆಜಾನ್ ಅಧಿಕಾರಿಗಳು ಹಾಗೂ ಮಾಲೀಕರ ವಿರುದ್ಧ ಎಫ್‍ಐಆರ್ ದಾಖಲಿಸಲು ನಾನು ಜಿಡಿಪಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಪರಮ ವಿಶಿಷ್ಟ ಸೇವಾ ಪದಕ