ಮಂಡ್ಯ: ನಗರದ ಗುತ್ತಲು ಬಡಾವಣೆ ನಿವಾಸಿ, ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್, ವಿದ್ಯುತ್ ಶಾಕ್‌ನಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದವರು ಮಗನಿಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿದ್ದರೆ, ಮತ್ತೊಂದೆಡೆ ಸ್ನೇಹಿತನಿಗಾಗಿ ವಿದ್ಯಾರ್ಥಿಗಳು ಜನರಿಂದ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ನರಸಿಂಹಮೂರ್ತಿ ಮತ್ತು ಶ್ಯಾಮಲಾ ದಂಪತಿ ಮಗ ವಿಶ್ವಾಸ್, ನಗರದ ಪಿಇಎಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಾರೆ. ಓದಿನ ಜತೆಗೆ ಫುಟ್ಬಾಲ್ ಕ್ರೀಡೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ – ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿ 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
Advertisement
Advertisement
ಜು.1ರಂದು ಸ್ವರ್ಣ ಫುಟ್ಬಾಲ್ ಸಂಸ್ಥೆ ಆಯೋಜಿಸಿರುವ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್ಬಾಲ್ ಕ್ರೀಡೆಯಲ್ಲಿ ತೊಡಗಬೇಕಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‌ಗೆ ಒಳಗಾಗಿದ್ದರು.
Advertisement
Advertisement
ಇದರಿಂದಾಗಿ ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಿದ್ಯುತ್ ದುರಂತಕ್ಕೆ ಒಳಗಾಗ ವಿಶ್ವಾಸ್ ದೇಹದ ಶೇ.80ರಷ್ಟು ಭಾಗ ಹಾನಿಗೊಳಗಾಗಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ. ವಿಶ್ವಾಸ್ ಚಿಕಿತ್ಸೆಗೆ ದಿನವೊಂದಕ್ಕೆ ಸಾವಿರಾರೂ ರೂ. ವೆಚ್ಚ ತಗುಲುತ್ತಿದೆ. ಇತ್ತ ಕಾಲೇಜಿನ ವಿದ್ಯಾರ್ಥಿಗಳು ಹಣ ಸಂಗ್ರಹಿಸಿ ಚಿಕಿತ್ಸೆಗೆಂದು ನೀಡುತ್ತಿದ್ದಾರೆ. ಅಂತೆಯೇ ಪುಟ್ಬಾಲ್ ಕ್ಲಬ್‌ಗಳು ಕೂಡ ಆರ್ಥಿಕ ನೆರವು ಕೊಡುತ್ತಿವೆ. ಆದರೂ ಇನ್ನಷ್ಟು ಹಣದ ಅವಶ್ಯಕತೆ ಇದೆ. ಆದ್ದರಿಂದ ಸಹಾಯ ಮಾಡುವವರು ಬ್ಯಾಂಕ್ ಖಾತೆ ಸಂಖ್ಯೆ-17202610002717 (ಐಎಫ್‌ಎಸ್‌ಸಿ ಕೋಡ್-SYNB0001720), ಫೋನ್ ಪೇ ಅಥವಾ ಗೂಗಲ್ ಪೇ ಸಂಖ್ಯೆ – 9900201307 (ಅಶ್ವಿನಿ) ಹಣ ಕಳುಹಿಸಬಹುದು. ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಯುವ ಪ್ರತಿಭೆಗೆ ನೆರವಾಗಬೇಕೆಂದು ಕುಟುಂಬದವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ