ಗಾಂಧಿನಗರ: 2020ರ ಟೋಕಿಯೋ ಒಲಿಂಪಿಕ್ಸ್ (Olympics) ಪದಕ ವಿಜೇತೆ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Olympics, CommonWealth Games) ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಸಾಯಿಕೋಮ್ ಮೀರಾಬಾಯಿ ಚಾನು (Mirabai Chanu) ಇದೀಗ ಗುಜರಾತ್‌ನಲ್ಲಿ ನಡೆಯುತ್ತಿರುವ ನ್ಯಾಷನಲ್ ಗೇಮ್ಸ್-2022 (National Games 2022) ಕ್ರೀಡಾಕೂಡದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
National Games: Mirabai Chanu wins gold in 49kg weightlifting
Read @ANI Story | https://t.co/7jMOaKcyUb#NationalGames #MirabaiChanu #weightlifting pic.twitter.com/Xhk7EwQVAf
— ANI Digital (@ani_digital) September 30, 2022
Advertisement
49 ಕೆಜಿ ವೇಟ್‌ಲಿಫ್ಟಿಂಗ್ (WeightLifting) ವಿಭಾಗದಲ್ಲಿ ಒಟ್ಟು 191 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ (GoldMedal)ಕ್ಕೆ ಕೊರಳೊಡ್ಡಿದ್ದಾರೆ. ಸ್ನ್ಯಾಚ್‌ನಲ್ಲಿ 84 ಕೆಜಿ ಹಾಗೂ ಕ್ಲೀನ್ ಅಂಡ್ ಜೆರ್ಕ್‌ನಲ್ಲಿ 107 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಇದನ್ನೂ ಓದಿ: CommonwealthGames: ಚಿನ್ನದ ಬೇಟೆಯೊಂದಿಗೆ ದಾಖಲೆ ಬರೆದ ಮೀರಾಬಾಯಿ ಚಾನು
Advertisement
Advertisement
ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದು ಹೊಸ ದಾಖಲೆ ಬರೆದಿದ್ದರು. ಅಲ್ಲದೇ 2014ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ, 2018ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 2017ರಲ್ಲಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ನಂತರ ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳನ್ನೂ ಬೇಟೆಯಾಡಿದ್ದಾರೆ. 2022ರ ಕಾಮನ್‌ವೆಲ್ತ್ ಗೇಮ್ಸ್ ಬಳಿಕ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮೀರಾಬಾಯಿ ಚಾನು, ಶೀಘ್ರದಲ್ಲೇ ಚೇತರಿಕೆ ಕಂಡು ಮತ್ತೆ ಚಿನ್ನದ ಪದಕ ಬಾಚಿಕೊಂಡಿದ್ದಾರೆ.