ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (bS Yediyurappa) ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಭೇಟಿಯಾಗಿ ಇಂದು ಆಶೀರ್ವಾದ ಪಡೆದಿದ್ದಾರೆ.
ಈ ಸಂಬಂಧ ತಮ್ಮ ಫೇಸ್‍ಬುಕ್ (Facebook) ನಲ್ಲಿ ಬರೆದುಕೊಂಡಿರುವ ಸಿ.ಟಿ ರವಿ, ನಮ್ಮ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿದೆನು. ಸದಾ ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುವ ಬಿಎಸ್‍ವೈ ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ನನ್ನ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಳಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ.
ವಿಧಾನಸಭಾ ಅಧಿವೇಶನದ (Vidhanasabha Session) ನಂತರ ಲೋಕಸಭಾ ಚುನಾವಣಾ (Loksabha Election) ನಿಮಿತ್ತ ರಾಜ್ಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತೇನೆ ಎಂಬ ಅವರ ಪಕ್ಷದ ಮೇಲಿನ ಪ್ರೀತಿ ಮತ್ತು ಸಂಘಟನೆ ಮಾಡಬೇಕೆಂಬ ಛಲ ನನಗೆ ಇನ್ನಷ್ಟು ಸಂಘಟನಾತ್ಮಕ ಪ್ರವಾಸ ಮಾಡಬೇಕೆಂದು ಪ್ರೇರಣೆ ನೀಡಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ವೆಬ್ ಸೀರೀಸ್ ಪ್ರಶಸ್ತಿ ಘೋಷಿಸಿದ ಸಚಿವ ಅನುರಾಗ್ ಠಾಕೂರ್
ಸದ್ಯ ಸಿ.ಟಿ ರವಿಯವರ ಬಿಎಸ್‍ವೈ ಭೇಟಿ ಮತ್ತು ಆಶೀರ್ವಾದ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]