ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald) ಈಗ ಡಿಕೆ ಬ್ರದರ್ಸ್ ಬುಡಕ್ಕೆ ಬಂದಿದೆ. ಯಂಗ್ ಇಂಡಿಯಾಗೆ ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್ (DK Suresh) 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಹೆಚ್ಚುವರಿ ಜಾರ್ಜ್‌ಶೀಟ್‌ನಲ್ಲಿ ಡಿಕೆ ಬ್ರದರ್ಸ್ ಹೆಸರು ಉಲ್ಲೇಖವಾಗಿದೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ದೇಣಿಗೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪಿಸಿದೆ. ಇದನ್ನೂ ಓದಿ: ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರೂ, ಅದಕ್ಕೇ ತಮನ್ನಾನ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್
ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿ (Rahul Gandhi) 142 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಈ ಮೊದಲು ಆರೋಪಿಸಿತ್ತು.
ಏನಿದು ಪ್ರಕರಣ?
ಕ್ರಿಮಿನಲ್ ಪಿತೂರಿ ನಡೆಸಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ (ಎಜೆಎಲ್) ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೊಡಾ, ಸುಮನ್ ದುಬೆ ಮತ್ತು ಇತರ ಕಾಂಗ್ರೆಸ್ ನಾಯಕರು ಪಡೆದಿದ್ದಾರೆ. ಇದನ್ನೂ ಓದಿ: ಯೂಟ್ಯೂಬ್ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್, ವಿಜಯಲಕ್ಷ್ಮಿಗೆ ಸಮನ್ಸ್
ಯಂಗ್ ಇಂಡಿಯನ್ ಲಿಮಿಟೆಡ್ ಮೂಲಕ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸೋನಿಯಾ ಮತ್ತು ರಾಹುಲ್ ಅವರು ಕೇವಲ 50 ಲಕ್ಷ ರೂ.ಗೆ ಖರೀದಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಎಜೆಎಲ್‌ಗೆ ನೀಡಿದ್ದ 90.2 ಕೋಟಿ ರೂ. ಸಾಲವನ್ನು 9.02 ಕೋಟಿಯ ಈಕ್ವಿಟಿ ಷೇರುಗಳನ್ನಾಗಿ ಪರಿವರ್ತಿಸಿ ಯಂಗ್ ಇಂಡಿಯನ್‌ಗೆ ವರ್ಗಾಯಿಸಲಾಗಿದೆ ಎಂದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.