ನವದೆಹಲಿ/ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಗುರುವಾರ ವಿಚಾರಣೆಗೆ ಕರೆಸಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರು ಸೋನಿಯಾ ಗಾಂಧಿ ಅವರಿಗೆ ಬೆಂಬಲ ಸೂಚಿಸಲು ಬೀದಿಗಿಳಿದಿದ್ದಾರೆ.
Advertisement
ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯ ಇಡಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿ, ಸೋನಿಯಾ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ. ಸೋನಿಯಾ ಗಾಂಧಿ ಇಡಿ ವಿಚಾರಣೆಯನ್ನು ಖಂಡಿಸಿ, ದೇಶಾದ್ಯಂತ ಪ್ರತಿಭಟನೆ ಭುಗಿಲೇಳುತ್ತಿದೆ. ಇಡಿ ಕಚೇರಿ ಮುಂದೆ ಪ್ರತಿಭಟನೆ ನಿಯಂತ್ರಣ ಮಾಡಲಿ ಪೊಲೀಸರು ಕಾರ್ಯಕರ್ತರ ಮೇಲೆ ಜಲ ಫಿರಂಗಿ ಸಿಡಿಸಿದ್ದಾರೆ. ಇದನ್ನೂ ಓದಿ: 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಈಗ ಋಣ ತೀರಿಸುವ ಸಮಯ ಬಂದಿದೆ: ರಮೇಶ್ ಕುಮಾರ್
Advertisement
Advertisement
Advertisement
ರಾಜ್ಯದಲ್ಲೂ ಪ್ರತಿಭಟನೆ:
ರಾಜ್ಯದಲ್ಲೂ ಸಹ ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಾಗೂ ರಾಜಭವನ ಚಲೋ ಹಮ್ಮಿಕೊಂಡೊದ್ದಾರೆ. ಈಗಾಗಲೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಪ್ರಾರಂಭವಾಗಿದ್ದು, ಎಲ್ಲಾ ಕೈ ಶಾಸಕರು, ಸಂಸದರು ಭಾಗವಹಿಸಿ ಬಿಜೆಪಿ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.
ಈ ಹಿನ್ನೆಲೆ ಫ್ರೀಡಂ ಪಾರ್ಕ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. 5 ಎಸಿಪಿ, 15 ಇನ್ಸ್ ಪೆಕ್ಟರ್, 30 ಪಿಎಸ್ ಐ, 600 ಮಂದಿ ಪೊಲೀಸ್ ಸಿಬ್ಬಂದಿ, ಹೆಚ್ಚುವರಿಯಾಗಿ 5 ಕೆಎಸ್‌ಆರ್‌ಪಿ ತುಕಡಿ ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯ ಹಿನ್ನೆಲೆ ಅಲ್ಲಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೃಪತುಂಗ ರೋಡ್, ಕೆಆರ್ ಸರ್ಕಲ್, ಕೆಜಿ ರೋಡ್ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ.