ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಿಚಾರಣೆಗೆ ಹಾಜರಾದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಹ ಅವರಿಗೆ ಸಾಥ್ ಕೊಟ್ಟಿದ್ದಾರೆ.
Advertisement
ಇಂದು ಇಡಿ ಮುಂದೆ ರಾಹುಲ್ ಗಾಂಧಿ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆ ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಿ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದ್ದಾರೆ. ಈಗಾಗಲೇ ಕಾರ್ಯಕರ್ತರು ಎಐಸಿಸಿ ಕಚೇರಿ ಮತ್ತು ರಾಹುಲ್ ಗಾಂಧಿ ನಿವಾಸದ ಮುಂದೆ ಜಮಾವಣೆಯಾಗಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ, ನಟ ಸಿದ್ಧಾಂತ್ ಕಪೂರ್ ಬಂಧನ
Advertisement
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಕ್ರಮವನ್ನು ಪ್ರತಿಭಟಿಸಿ ಇಂದು ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಮಾಡಿ ಪ್ರತಿಭಟಿಸಿದರು. ಈ ವೇಳೆ ಕಾರ್ಯಕರ್ತರು ತಮ್ಮ ನಾಯಕರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.