ನವದೆಹಲಿ: ನ್ಯಾಷನಲ್ ಹೆರಾಲ್ಡ್ ಸಂಕಷ್ಟದಲ್ಲಿ ಸಿಲುಕಿರುವ ಎಐಸಿಸಿ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಸೋಮವಾರ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ವಿಚಾರಣೆ ಆರಂಭವಾಗಲಿದೆ. ಕಳೆದ ವಾರ ಸೋಮವಾರದಿಂದ ಮೂರು ದಿನಗಳ ನಿರಂತರ ವಿಚಾರಣೆ ಎದುರಿಸಿದ್ದ ರಾಹುಲ್ ಗಾಂದಿ, 30 ಗಂಟೆಗಳ ವಿಚಾರಣೆಯಲ್ಲಿ ಸುಮಾರು 16 ಪ್ರಶ್ನೆಗಳಿಗೆ 70 ಪುಟಗಳ ಹೇಳಿಕೆ ದಾಖಲು ಮಾಡಿದ್ದರು.
Advertisement
Advertisement
ಮೂರು ದಿನಗಳ ವಿಚಾರಣೆ ಬಳಿಕ ಇಡಿ ಕಳೆದ ಗುರುವಾರ ವಿಚಾರಣೆಯಿಂದ ವಿನಾಯಿತಿ ನೀಡಿ ಶುಕ್ರವಾರ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ ತಾಯಿ ಸೋನಿಯಾಗಾಂಧಿಗೆ ಅನಾರೋಗ್ಯ ಮತ್ತು ಜನ್ಮ ದಿನದ ಹಿನ್ನಲೆ ಸೋಮವಾರದವರೆಗೂ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದ್ದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಗಳು ರೈಲಿಗೆ ಬೆಂಕಿ ಹಚ್ಚಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ: ಈಶ್ವರಪ್ಪ
Advertisement
Advertisement
ಈ ಹಿನ್ನೆಲೆ ನಾಳೆ ನಾಲ್ಕನೇ ದಿನದ ವಿಚಾರಣೆ ರಾಹುಲ್ ಗಾಂಧಿ ವಿಚಾರಣೆ ಹಾಜರಾಗಲಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಲು ಸನ್ನದ್ಧವಾಗಿದೆ. ಕಳೆದ. ವಾರವೂ ಉಗ್ರ ಹೋರಾಟ ಮಾಡಿದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಲು ಸಿದ್ಧವಾಗಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಎಐಸಿಸಿ ಮತ್ತು ಇಡಿ ಕಚೇರಿಯ ಸುತ್ತ 144 ಸೆಕ್ಷನ್ ಜಾರಿ ಮಾಡಿದ್ದು ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ರಾಹುಲ್ ಗಾಂಧಿ ಅವರ ವಿಚಾರಣೆಗೆ ಸಂಬಂಧಿಸಿದ ಮಾಹಿತಿಯನ್ನು ಕೆಲವು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರಿಗೆ ಲೀಗಲ್ ನೋಟಿಸ್ ಕಳುಹಿಸಿರುವ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಕಾನೂನು ಘಟಕದ ಮುಖ್ಯಸ್ಥ ವಿವೇಕ್ ಟಂಖಾ, ಕೇಂದ್ರ ಮಂತ್ರಿಗಳು ಇಡಿಯನ್ನು ರಾಜಕೀಯ ಸೇಡಿಗಾಗಿ ಬಳಸುವುದನ್ನು ನಿಲ್ಲಿಸಬೇಕು ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷರ ಬಗ್ಗೆ ಸುಳ್ಳು ನಿರೂಪಣೆಗಳನ್ನು ಹರಡುವುದನ್ನು ನಿಲ್ಲಿಸಬೇಕೆಂದು ನೋಟಿಸ್‍ನಲ್ಲಿ ಆಗ್ರಹಿಸಿದ್ದಾರೆ.