ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಎರಡು ಕಾರಿಗೆ ಬೆಂಕಿ ಹಚ್ಚಿದ್ದಾರೆ.
ಶಾಂತಿ ನಗರ ವಿಲ್ಸನ್ ಗಾರ್ಡನ್ ಹಾಗೂ ಶೇಷಾದ್ರಿಪುರಂ ಬಳಿ ಕಾರುಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರಂಭದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವುದು ತಿಳಿದು ಬಂದಿರಲಿಲ್ಲ. ನಂತರ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಕಾರ್ಯಕರ್ತರೇ ತಮ್ಮ ಕಾರುಗಳಿಗೆ ಬೆಂಕಿ ಹಚ್ಚು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಡಿ ವಿಚಾರಣೆಗೆ ಸೋನಿಯಾ ಹಾಜರ್ – ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ
ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಎರಡು ಕಾರುಗಳಿಗೆ ಬೆಂಕಿ ಹಾಕಿದ್ದಾರೆ. ಅವರ ಕಾರಿಗೆ ಅವರೇ ತಂದು ಬೆಂಕಿ ಹಾಕಿದ್ದಾರೆ. ಇದನ್ನ ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ ವ್ಯಕ್ತಿ ಈ ರೀತಿ ಮಾಡಿದ್ದಕ್ಕೆ ಕೋಪಗೊಂಡು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದರು.