ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕಾಗಿ ಇಂದು ಸಹ ಲಕ್ಷಾಂತರ ಜನ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ತುಮಕೂರು ನಗರದೊಳಗೆ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ತುಮಕೂರು ಹೊರ ವಲಯದಲ್ಲೇ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದು, ಬ್ಯಾರಿಕೇಡ್ ಹಾಕಿ ಬಾರಿ ಬಿಗಿ ಭದ್ರತೆ ನೀಡಲಾಗಿದೆ. ತುಮಕೂರು ನಗರದ ಒಳಗೆ ಹಾಗೂ ಹೊರಗೆ ಹೋಗಲು ಜನರ ಪರದಾಟ ಪಡುತ್ತಿದ್ದಾರೆ. ಆದರೂ ಅನೇಕ ಜನರು ರಾಷ್ಟ್ರೀಯ ಹೆದ್ದಾರಿಯಲ್ಲೇ ಕಾದು ಕಾದು ಸುಸ್ತಾಗಿದ್ದಾರೆ. ಹೀಗಾಗಿ ತುಮಕೂರು ಹೊರ ವಲಯದಲ್ಲೇ ವಾಹನಗಳನ್ನು ಬೇರೆ ಮಾರ್ಗದಿಂದ ಮುಂದಕ್ಕೆ ಬಿಡಲಾಗುತ್ತಿದೆ. ಇದನ್ನೂ ಓದಿ: ತುಮಕೂರು ನಗರ ಪ್ರವೇಶದ ಮಾರ್ಗ ಬದಲಾವಣೆ
ನಿತ್ಯವೂ ವಾಹನಗಳ ಸಂಚಾರದಿಂದ ಗಿಜಗುಡುತಿದ್ದ ರಾಷ್ಟ್ರೀಯ ಹೆದ್ದಾರಿ 4 ಇಂದು ಸಂಪೂರ್ಣ ಬಂದ್ ಆಗಿದೆ. ತುಮಕೂರು ಪ್ರವೇಶಿಸುವ ರಸ್ತೆಗಳು ಬಿಕೋ ಎನ್ನುತ್ತಿವೆ. ಅಷ್ಟೇ ಅಲ್ಲದೇ ಇತ್ತ ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಹೋಟೆಲ್ ಮುಗ್ಗಟ್ಟುಗಳು ಬಂದ್ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಊಟ, ಉಪಹಾರಕ್ಕೆ ಸಮಸ್ಯೆಯಾಗದಂತೆ ನಾಗರೀಕರು, ಸಂಘ ಮತ್ತು ಸಂಸ್ಥೆಗಳು ಕಾಳಜಿ ವಹಿಸಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬಸ್ ನಿಲ್ದಾಣದ ಬಳಿ ಊಟ ಮತ್ತು ಉಪಹಾರ ವ್ಯವಸ್ಥೆ ಮಾಡಲಾಗಿದೆ.
https://www.youtube.com/watch?v=mxA9HE4qgJQ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv