ಬೆಂಗಳೂರು: ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.15 ರಿಂದ 22ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಏಕಾಂಶ್ ಕುಮಾರ್.ಎನ್ ಎರಡು ಪದಕಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
14 ರಿಂದ 17 ವರ್ಷದೊಳಗಿನ ರಾಷ್ಟ್ರಮಟ್ಟದ ಇನ್‍ಲೈನ್ ಸ್ಕೇಟಿಂಗ್‍ನ ಜ್ಯೂನಿಯರ್ಸ್ ಬಾಲಕರ ವಿಭಾಗದಲ್ಲಿ ಏಕಾಂಶ್ ಕುಮಾರ್ ಎನ್ 1,000 ಮೀಟರ್ ರಿಂಕ್ ರೇಸ್‍ನಲ್ಲಿ ಬೆಳ್ಳಿ ಪದಕ ಹಾಗೂ ರಿಂಕ್ ರಿಲೇ ರೇಸ್‍ನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಫೆ.12,13 ರಂದು ಐಪಿಎಲ್ ಮೆಗಾ ಹರಾಜು?
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಮೂರು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದ ಏಕಾಂಶ್ ಕುಮಾರ್.ಎನ್ ರಾಷ್ಟ್ರ ಮಟ್ಟದಲ್ಲೂ ಪದಕ ಪಡೆದು ಸಾಧನೆ ಮಾಡಿದ್ದಾರೆ. ಏಕಾಂಶ್ ಬೆಂಗಳೂರಿನ ಅಪೋಲೋ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನಲ್ಲಿ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹೊಸಕೆರೆ ಹಳ್ಳಿ ನವೀನ್ ಕುಮಾರ್ ಹಾಗೂ ಸೌಮ್ಯ ಟಿ.ಆರ್ ದಂಪತಿಯ ಪುತ್ರ. ಬೆಂಗಳೂರಿನ ಫೋರ್ಸ್ ವನ್ ಸ್ಕೇಟಿಂಗ್ ಕ್ಲಬ್‍ನ ಸದಸ್ಯರಾಗಿದ್ದು, ತರಬೇತುದಾರಾದ ಪ್ರತೀಕ್ ರಾಜ ಹಾಗೂ ಕುಮಾರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬಿಸಿಸಿಐಯನ್ನು ಟೀಕಿಸಿ ಕೊಹ್ಲಿ ಪರ ಅಫ್ರಿದಿ ಬ್ಯಾಟಿಂಗ್