ನವದೆಹಲಿ: ನೀಟ್, ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಬೆನ್ನಲ್ಲೇ CSIR-UGC-NET ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮುಂದೂಡಿದೆ.
ಜೂನ್ 25 ಮತ್ತು ಜೂನ್ 27 ರಂದು ಪರೀಕ್ಷೆಗಳು ನಡೆಯಬೇಕಿತ್ತು. ಲಾಜಿಸ್ಟಿಕ್ ಸಮಸ್ಯೆಗಳಿಂದ ಪರೀಕ್ಷೆ (Exam) ಮುಂದೂಡಲಾಗುತ್ತಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು ಎಂದು ಎನ್‌ಟಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ಯುಜಿಸಿ ನಿಗದಿಪಡಿಸಿದ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF), ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು ಮತ್ತು ಪಿಎಚ್‌ಡಿ ಪ್ರವೇಶಗಳಿಗೆ ಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ನಡೆಸಲಾಗುತ್ತದೆ. ಇದನ್ನೂ ಓದಿ: 31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು
Advertisement
CSIR-UGC-NET ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಜೂನ್ ಮತ್ತು ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರೆ ಈ ವರ್ಷ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
Advertisement