ಸ್ಯಾಂಡಲ್ವುಡ್ ನಟಿ ಹಾಗೂ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ (Sharmiela Mandre) ಹಾಗೂ ನಿರ್ಮಾಪಕ ಸುಧನ್ ಸುಂದರಂ (Sudhan Sundaram) ದಂಪತಿ ತಮ್ಮ ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ತಾವು ತಾಯಿಯಾಗುತ್ತಿರುವ ವಿಚಾರವನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ/
ಹೌದು. ಮದುವೆಯಾದ 4 ತಿಂಗಳಲ್ಲೇ ಈ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ವಿಚಾರವನ್ನ ನಟಿ ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
View this post on Instagram
ಶರ್ಮಿಳಾ ಮಾಂಡ್ರೆ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅತ್ಯಂತ ಮುದ್ದಾದ ಫೋಟೋವೊಂದನ್ನ ಪೋಸ್ಟ್ ಮಾಡುವ ಮೂಲಕ ಈ ಶುಭ ಸುದ್ದಿ ತಿಳಿಸಿದ್ದಾರೆ. ಈ ಫೋಟೋದಲ್ಲಿ ಶರ್ಮಿಳಾ ಮತ್ತು ಪತಿ ಸುಧನ್ ಸುಂದರಂ ಪರಸ್ಪರ ಕೈಹಿಡಿದುಕೊಂಡಿದ್ದು, ತಮ್ಮ ಬೆರಳುಗಳಲ್ಲಿ ಪುಟ್ಟ ಮಗುವಿನ ಬಿಳಿ ಬಣ್ಣದ ಬೂಟುಗಳನ್ನು (Knitted Baby Booties) ಧರಿಸಿರುವುದು ಕಂಡುಬಂದಿದೆ.
ಈ ಚಿತ್ರಕ್ಕೆ ನಟಿ ʻLittle steps aheadʼ (ಮುಂದೆ ಪುಟ್ಟ ಹೆಜ್ಜೆಗಳು) ಎಂದು ಬರೆದುಕೊಂಡಿದ್ದಾರೆ. ತಮ್ಮ ಜೀವನದ ಹೊಸ ಅಧ್ಯಾಯ ಸ್ವಾಗತಿಸುವ ಸಂಭ್ರಮವನ್ನು ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್ಗೆ ಸಿನಿ ರಂಗದ ಗಣ್ಯರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರ ನಿರ್ಮಾಪಕ ಸುಧನ್ ಸುಂದರಂ 2026ರ ಜುಲೈ 12 ರಂದು ರಾಜಸ್ಥಾನದ ಜೈಪುರದಲ್ಲಿರುವ ಐತಿಹಾಸಿಕ ಸಮೋದ್ ಅರಮನೆ (Samode Palace) ಮತ್ತು ಸಮೋದ್ ಬಾಗ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಗೂ ಮುನ್ನ 2026ರ ಜೂನ್ 25 ರಂದು ಬೆಂಗಳೂರಿನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಈ ಜೋಡಿ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

