ಕಾರವಾರ: ಪ್ರತಿವರ್ಷ ಜೂನ್ 21ರಂದು ವಿಶ್ವ ಯೋಗದಿನವನ್ನಾಗಿ (World Yoga Day) ಆಚರಿಸಲಾಗುತ್ತದೆ. ಈ ಹಿನ್ನೆಲೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ (Karwar) ನೌಕಾದಳ ಸಿಬ್ಬಂದಿ (Naval Personnel) ಏಕಕಾಲದಲ್ಲಿ ಯೋಗ (Yoga) ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದ್ದಾರೆ.
ನೌಕಾದಳದ 200ಕ್ಕೂ ಹೆಚ್ಚು ಸಿಬ್ಬಂದಿ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿದರು. ಅನೇಕ ರೀತಿಯ ಯೋಗ ಭಂಗಿಗಳನ್ನು ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಗೆ ಹೆಚ್ಚಿನ ಮೆರುಗನ್ನು ತುಂಬಿದರು. ಇದನ್ನೂ ಓದಿ: ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ಐತಿಹಾಸಿಕ: ಮೋದಿ
ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಸಮಿತಿ, ರೋಟರಿ ಕ್ಲಬ್, ಎನ್‌ಸಿಸಿ, ಸ್ಕೌಟ್ ಗೈಡ್ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದೂ, ಎಸ್ಪಿ ವಿಷ್ಣುವರ್ಧನ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಇದನ್ನೂ ಓದಿ: ಯೋಗಾ ಯೋಗ – ಶರೀರ, ಮನಸ್ಸಿನ ಆರೋಗ್ಯದ ಕೊಂಡಿ ಯೋಗ
ಇಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 9ನೇ ಯೋಗ ದಿನಾಚರಣೆಯ ನೇತೃತ್ವವನ್ನು ಮೋದಿ ವಹಿಸಲಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 5:25 ರಿಂದ 6:30ರ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 180ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಅನ್ನ ಭಾಗ್ಯ ಫೈಟ್ ದೆಹಲಿಗೆ ಶಿಫ್ಟ್