Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

Karnataka

ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

Public TV
Last updated: October 9, 2018 7:43 pm
Public TV
Share
4 Min Read
shailputri and shiva
SHARE

ಅಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳ ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.

ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು ದಿನ ಮಹಾಲಕ್ಷ್ಮಿಯನ್ನೂ, ಕೊನೆಯ ಮೂರು ದಿನ ಮಹಾ ಸರಸ್ವತಿಯನ್ನು ಪೂಜಿಸಲಾಗುತ್ತಿದೆ. ಮಹಾಕಾಳಿ ತಾಮಸ ಗುಣಕ್ಕೂ, ಮಹಾಲಕ್ಷ್ಮಿ ರಾಜಸಗುಣಕ್ಕೂ, ಮಹಾಸರಸ್ವತಿ ಸಾತ್ವಿಕ ಗುಣದ ಸಂಕೇತ. ನವರಾತ್ರಿ ಆಚರಿಸುವ ಭಕ್ತರು ತಾಮಸದಿದ ರಾಜಸದೆಡೆಗೆ, ರಾಜಸದಿಂದ ಸಾತ್ವಿಕದೆಡೆಗೆ ಬಂದಾಗ ಹಬ್ಬ ಹೆಚ್ಚು ಅರ್ಥಪೂರ್ಣವಾಗುತ್ತದೆ.

ನವರಾತ್ರಿ ವೇಳೆ ದೇವಿಯ ಪೂಜೆ, ದೇವಿ ಭಾಗವತ, ದುರ್ಗ ಸಪ್ತಶತೀ, ಲಲಿತಾ ಸಹಸ್ರನಾಮ ಪವಿತ್ರ ಸ್ತೋತ್ರಗಳ ಮತ್ತು ಮಂತ್ರಗಳ ಪಠಣ ಹಾಗೂ ಪಾರಾಯಣ ನಡೆಯುತ್ತದೆ. ನವದುರ್ಗೆಯರ ಆರಾಧನೆಯ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿದಿನ ದೇವಿಯ ಒಂದೊಂದು ಅವತಾರದ ವಿವರಣೆಯನ್ನು ಪಬ್ಲಿಕ್ ಟಿವಿ ಪ್ರಕಟಿಸಲಿದೆ.

ಒಂಬತ್ತು ದುರ್ಗೆಯರು:
1. ಶೈಲಪುತ್ರಿ
2. ಬ್ರಹ್ಮಚಾರಿಣಿ
3. ಚಂದ್ರಘಂಟಾ
4. ಕೂಷ್ಮಾಂಡಾ
5. ಸ್ಕಂದ ಮಾತೆ
6. ಕಾತ್ಯಾಯನಿ
7. ಕಾಳರಾತ್ರಿ
8. ಮಹಾಗೌರಿ
9. ಸಿದ್ಧಿದಾತ್ರಿ

shailputri navarathiri
ಪರ್ವತ ರಾಜ ಹಿಮವಂತನ ಪುತ್ರಿಯೇ ಶೈಲಪುತ್ರಿ. ದಸರಾ ದಿನ ಈ ದೇವಿಯನ್ನು ಮೊದಲಿಗೆ ಆರಾಧಿಸುತ್ತಾರೆ. ಈ ದೇವಿಯನ್ನು ಆರಾಧಿಸಲು ಒಂದು ಕಥೆಯಿದೆ. ಪ್ರಜಾಪತಿ ಬಹ್ಮನ ಮಗನಾದ ದಕ್ಷ ತನ್ನ 27 ಮಂದಿ ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ. ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದ್ದಳು.

ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಹಿಮಾವೃತವಾಗಿರುವ ಕೈಲಾಸ ಅಥವಾ ಸ್ಮಶಾನದಲ್ಲಿ ವಾಸ, ಕುತ್ತಿಗೆಗೆ ನಾಗರಹಾವು ಇರುವ ಶಿವನಿಗಿಂತ ನನ್ನ ಚೆಲುವೆಯಾಗಿರುವ ಮಗಳಿಗೆ ಉತ್ತಮನಾಗಿರುವ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.

ಶಿವನ ವಿಚಾರದಲ್ಲಿ ಅಸಮಾಧಾನವನ್ನು ಹೊರಹಾಕುತ್ತಿದ್ದ ದಕ್ಷ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲ ಮಕ್ಕಳಿಗೆ, ಬಂಧು ಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈ ವೇಳೆ ದಕ್ಷ, “ಶಿವ ದೇವರು ಆಗಿರಬಹುದು. ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ” ಎಂದು ಮನಸ್ಸಿನಲ್ಲೇ ಕಹಿಯನ್ನು ಅನುಭವಿಸಿದ.

shiva 1943189 640

ಕೆಲ ಸಮಯದ ಬಳಿಕ ದಕ್ಷ ಮತ್ತೊಂದು ಯಜ್ಞವನ್ನು ಆಯೋಜಿಸಿದ. ಈ ಬಾರಿ ಮಗಳು ದಾಕ್ಷಾಯಿಣಿ ಮತ್ತು ಶಿವನಿಗೆ ಆಹ್ವಾನ ನೀಡದೇ ಎಲ್ಲ ಮಕ್ಕಳಿಗೆ ಆಹ್ವಾನ ನೀಡಿದ್ದ. ತಂದೆ ಯಾಗವನ್ನು ಆಯೋಜಿಸಿದ ವಿಚಾರ ತಿಳಿದು ಮಗಳು ಶಿವನ ಜೊತೆ,”ನಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ” ಎಂದು ಕೇಳುತ್ತಾಳೆ. ಇದಕ್ಕೆ ಶಿವ,”ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು. ತವರು ಮನೆ ಸೇರಿದಂತೆ ಎಲ್ಲಿಗೂ ಹೋಗಬಾರದು” ಎಂದು ತಿಳಿಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿ,”ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತುಹೋಗಿರಬಹುದು. ತಂದೆ ಮನೆಗೆ ಹೋಗಲು ಮಗಳಿಗೆ ಆಹ್ವಾನ ಯಾಕೆ ಬೇಕು”ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿಯ ಹಠಕ್ಕೆ ಕರಗಿ ಶಿವ ತಂದೆಯ ಮನೆಗೆ ಹೋಗಲು ಅನುಮತಿ ನೀಡುತ್ತಾನೆ.

ಪತಿಯಿಂದ ಅನುಮತಿ ಸಿಕ್ಕಿದ್ದೆ ತಡ ದಾಕ್ಷಾಯಿಣಿ ಶಿವನ ವಾಹನ ನಂದಿಯನ್ನೇರಿ, ಕೈಗೆ ಸಿಕ್ಕ ಉಡುಗೊರೆಯನ್ನು ಹಿಡಿದುಕೊಂಡು ತಂದೆಯ ಯಜ್ಞ ಸಮಾರಂಭಕ್ಕೆ ತೆರಳುತ್ತಾಳೆ. ಮಗಳನ್ನು ನೋಡಿದ ಕೂಡಲೇ ದಕ್ಷ,”ನಾನು ನಿನಗೆ ಆಹ್ವಾನ ನೀಡಿಲ್ಲ. ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ” ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ಆ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನ ವಿರುದ್ಧ ಕಿಡಿಕಾರುತ್ತಾನೆ.”ನೀನು ಪತಿಯನ್ನು ಸೇರು. ಇಲ್ಲಿಂದ ಹೊರಟು ಹೋಗು” ಎಂದು ಅವಮಾನಿಸುತ್ತಾನೆ. ಈ ಎಲ್ಲರ ಮುಂದೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿ ಶಿವನನ್ನು ಧ್ಯಾನಿಸುತ್ತಾ,”ಪತಿಯೇ ನಾನು ನಿಮ್ಮ ಮಾತನ್ನು ಕೇಳಿ ಇಲ್ಲಿಗೆ ಬಾರಬಾರದಿತ್ತು. ತಂದೆ ನಿಮಗೆ ಮಾಡಿದ ಈ ಅವಮಾನವನ್ನು ನಾನು ಸಹಿಸಲಾರೆ” ಎಂದು ಪ್ರಾರ್ಥಿಸಿ ಮುಂದಿದ್ದ ಯಜ್ಞ ಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ.

Shiva Yog

ಪತಿಯನ್ನು ಅವಮಾನಿಸಿದ್ದನ್ನು ಸಹಿಸದೆ ಯಜ್ಞ ಕುಂಡಕ್ಕೆ ಹಾರಿಕೊಂಡಿದ್ದ ದಾಕ್ಷಾಯಿಣಿಗೆ ಅಂದಿನಿಂದ `ಸತಿ’ ಎಂಬ ಹೆಸರು ಬಂತು. ಸತಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿ ‘ಶೈಲಪುತ್ರಿ’ ಎಂದು ಹೆಸರುವಾಸಿಯಾಗುತ್ತಾಳೆ. ಮತ್ತೆ ಶಿವನ ಮಡದಿಯಾಗುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರ ಸೂಚನೆ ಏನೋ ಎಂಬಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣುಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯ ನಡೆಯುತ್ತದೆ. ಶೈಲಪುತ್ರಿ ವೃಷಭ ವಾಹನದ ಮೇಲೆ ಕುಳಿತು, ಬಲಗೈಯಲ್ಲಿ ತ್ರಿಶೂಲ ಮತ್ತು ಎಡಗೈಯಲ್ಲಿ ಕಮಲಪುಷ್ಪ ಹಿಡಿದುಕೊಂಡಿರುತ್ತಾಳೆ.

ದಸರಾ ಸುದ್ದಿಗಳು:

1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:DakshayaniDasaraDasara SpecialMysore DasaraMythologyNavaratriPublic TVShailaputrishivaದಸರಾದಸರಾ ವಿಶೇಷದಾಕ್ಷಾಯಿಣಿನವರಾತ್ರಿಪಬ್ಲಿಕ್ ಟಿವಿಪುರಾಣ ಕಥೆಮೈಸೂರು ದಸರಾಶಿವಶೈಲಪುತ್ರಿ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
8 minutes ago
Iran war Italys Meloni blocks US use of its air base for Iran operations Donald Trump sigonella base US bombers
Latest

ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Public TV
By Public TV
36 minutes ago
Chinnaswamy Phone Theft Arrest
Bengaluru City

RCB-SRH ಪಂದ್ಯದಲ್ಲಿ ಫೋನ್ ಕಳ್ಳತನ – 18 ಲಕ್ಷದ 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

Public TV
By Public TV
42 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY91 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
KUWJ Award Announced Best Anchor Award for Arun Badiger Public TV
Districts

KUWJ ವಾರ್ಷಿಕ ಪ್ರಶಸ್ತಿ ಪ್ರಕಟ – ಅರುಣ್ ಬಡಿಗೇರ್‌ಗೆ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ

Public TV
By Public TV
2 hours ago
Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?