ಚಂಡೀಗಢ: ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದೇನೆ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ವೈಯಕ್ತಿಕ ಅಹಂಕಾರದ್ದಲ್ಲ. ಪ್ರತಿಯೊಬ್ಬ ಪಂಜಾಬಿಗರ ಹಿತಾಸಕ್ತಿಯಾಗಿತ್ತು. ಅದಕ್ಕಾಗಿಯೇ ನಾನು ನನ್ನ ಹೆಸರನ್ನು ಬಹಳ ಉಗ್ರವಾಗಿ ಸಮರ್ಥಿಸಿಕೊಳ್ಳುತ್ತೇನೆ. ಏಕೆಂದರೆ ನನ್ನ ಮೇಲೆ ಸಾಕಷ್ಟು ಜವಾಬ್ದಾರಿ ಇದೆ ಎಂದಿದ್ದಾರೆ. ಪಂಜಾಬ್ ಕಾಂಗ್ರೆಸ್‍ನಲ್ಲಿ ನಡೆಯುತ್ತಿರುವ ಗೊಂದಲಗಳ ನಡುವೆ ಈ ಇಬ್ಬರು ನಾಯಕನೊಂದಿಗೆ ಸಭೆ ನಡೆಸಿದ ಬಳಿಕ ಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವುದಾಗಿ ಸಿಧು ಹೇಳಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ
Advertisement
Advertisement
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಸಿಧು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರೊಂದಿಗಿನ ಮುಸುಕಿನ ಗುದ್ದಾಟ ಹಿನ್ನೆಲೆಯಲ್ಲಿ ಸಿಧು ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.