ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ದೊಡ್ಡಣ್ಣ – ಮತ್ತೆ ವಿವಾದ ಸೃಷ್ಟಿಸಿದ ನವಜೋತ್ ಸಿಂಗ್

By
2 Min Read

ನವದೆಹಲಿ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿಯನ್ನು ನನ್ನ ಹಿರಿಯ ಸಹೋದರ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಶನಿವಾರ ಗುರುದ್ವಾರ ಕರ್ತಾರ್‌ಪುರ ಸಾಹಿಬ್‍ಗೆ ಭೇಟಿ ನೀಡಿದ ನವಜೋತ್ ಸಿಂಗ್ ಸಿಧು ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಡಾ ಭಾಯ್ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿದ್ದ ಸಸಿ ಕಿತ್ತುಕೊಂಡು ನೆಟ್ಟಿಗರ ಕಣ್ಣಿಗೆ ಗುರಿಯಾದ ಮಹಿಳೆಯರು – ವೀಡಿಯೋ ವೈರಲ್

ಇನ್ನೂ ಈ ವೀಡಿಯೋವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಅಮಿತ್ ಮಾಳವಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, “ರಾಹುಲ್ ಗಾಂಧಿಯವರ ನೆಚ್ಚಿನ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು “ಬಡಾ ಭಾಯ್” ಎಂದು ಕರೆಯುತ್ತಿದ್ದಾರೆ. ಕಳೆದ ಬಾರಿ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಅವರನ್ನು ತಬ್ಬಿಕೊಂಡಿದ್ದರು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ಕರ್ತಾರ್‌ಪುರ ಗುರುದ್ವಾರಕ್ಕೆ ಭೇಟಿ ನೀಡಿದ ನವಜೋತ್ ಸಿಂಗ್ ಅವರು, ಕರ್ತಾರ್‌ಪುರ ಅಧಿಕಾರಿಯೊಬ್ಬರನ್ನು ಭೇಟಿಯಾಗುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ನವಜೋತ್ ಸಿಂಗ್ ಸಿಧು ಅವರನ್ನು ಅಧಿಕಾರಿಗಳು ಹೂಮಾಲೆ ಹಾಕಿ ಸ್ವಾಗತಿಸುವ ವೇಳೆ, ಈ ದಿನಕ್ಕಾಗಿ ನಾವು ಇಷ್ಟು ದಿನ ಕಾಯುತ್ತಿದ್ದೇವು. ನನಗೆ ನಿಮ್ಮ ಮೇಲೆ ಗೌರವವಿದೆ. ಇಮ್ರಾನ್ ಖಾನ್ ಅವರು ನನ್ನ ಹಿರಿಯ ಸಹೋದರ. ತುಂಬಾ ಧನ್ಯವಾದ ಎಂದು ಹೇಳುವುದನ್ನು ವೀಡಿಯೋದಲ್ಲಿ ಹೆಳಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ನೀನು ನನ್ನ ಮಗ ಎಂದು ಹೇಳಲು ಹೆಮ್ಮೆ ಪಡುತ್ತೇನೆ: ಬಿಗ್ ಬಿ

ಈ ಮುನ್ನ 2018ರಲ್ಲಿ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ನವಜೋತ್ ಸಿಂಗ್ ಸಿಧು ಅವರು ಜನರಲ್ ಬಾಜ್ವಾ ಅವರನ್ನು ತಬ್ಬಿಕೊಂಡು ವಿವಾದದಲ್ಲಿ ಸಿಲುಕಿಕೊಂಡಿದ್ದರು.

Share This Article
Exit mobile version