ಚಂಡೀಗಢ: 34 ವರ್ಷದ ಹಿಂದಿನ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಇಂದು ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಕಾರಿನಲ್ಲಿ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ.
Advertisement
1988 road rage case | Punjab: Congress leader Navjot Singh Sidhu leaves for Sessions Court, from his residence in Patiala. pic.twitter.com/u9B0g87n5C
— ANI (@ANI) May 20, 2022
Advertisement
ಈ ಬಗ್ಗೆ ಸಿಧು ಅವರ ಮಾಧ್ಯಮ ಸಲಹೆಗಾರ ಸುರೇಂದರ್ ದಲ್ಲಾ ಪ್ರತಿಕ್ರಿಯಿಸಿ, ಪಟಿಯಾಲದ ಮುಖ್ಯ ನ್ಯಾಯಾಧೀಶರ ಮುಂದೆ ಸಿಧು ಶರಣಾಗಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
Advertisement
ಇಂದು ಬೆಳಗ್ಗೆ ನ್ಯಾಯಾಲಯದ ಮುಂದೆ ಶರಣಾಗಲು ಕೆಲವು ವಾರಗಳ ಸಮಯಬೇಕು ಎಂದು ಸಿಧು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದರು.
Advertisement
Patiala, Punjab | He (Navjot Singh Sidhu) has surrendered himself before Chief Judicial Magistrate. He is under judicial custody. Medical examination and other legal procedures will be adopted: Surinder Dalla, media advisor to Congress leader Navjot Singh Sidhu pic.twitter.com/U13TDDOPju
— ANI (@ANI) May 20, 2022
ಈ ವೇಳೆ ವಕೀಲರು, ಆರೋಗ್ಯ ಸಮಸ್ಯೆಗಳ ಕಾರಣದಿಂದ ತಕ್ಷಣ ಪೊಲೀಸರ ಮುಂದೆ ಶರಣಾಗಲು ಸಾಧ್ಯವಿಲ್ಲ. ವೈದ್ಯಕೀಯ ಸಲಹೆಗಳ ಬಳಿಕ ಸಿಧು ಪೊಲೀಸರ ಮುಂದೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದರು. ಮನವಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಇದಕ್ಕೆ ಸಂಬಂಧಿಸಿದ ಪ್ರತ್ಯೇಕ ಔಪಚಾರಿಕ ಅರ್ಜಿ ಸಲ್ಲಿಸಿ. ಆ ಬಳಿಕ ನಾವು ಈ ವಿಚಾರದ ಬಗ್ಗೆ ಪರಿಶೀಲನೆ ನಡೆಸಿ ಆದೇಶ ನೀಡುತ್ತೇವೆ ಎಂದು ಹೇಳಿತ್ತು.
ಗುರುವಾರ ನ್ಯಾ.ಎಂ.ಎಂ.ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ 1988ರ ಪ್ರಕರಣವೊಂದರಲ್ಲಿ ಸಿಧುಗೆ ಒಂದು ವರ್ಷ ಶಿಕ್ಷೆ ವಿಧಿಸಿತ್ತು.