ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ನೀಡುವ ಸುಳ್ಳುಗಾರ ಹಾಗೂ ರಾಜಕೀಯ ಪ್ರವಾಸಿ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಟೀಕಿಸಿದರು.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಜ್ರಿವಾಲ್ ಅವರು ಉದ್ಯೋಗದ ವಿಷಯದ ಕುರಿತು ಪಂಜಾಬ್‌ನಲ್ಲಿ ಅನೇಕ ಭರವಸೆಯನ್ನು ನೀಡಿದ್ದಾರೆ. ಹಾಗೆಯೇ ದೆಹಲಿಯಲ್ಲೂ 8 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ದೆಹಲಿಯಲ್ಲಿ ಕೇವಲ 440 ಜನರಿಗೆ ಮಾತ್ರ ಉದ್ಯೋಗವನ್ನು ನೀಡಿ ಮೋಸ ಮಾಡಿದ್ದಾರೆ ಎಂದರು.
Advertisement
Advertisement
ಪAಜಾಬ್‌ನಲ್ಲಿ ಕೇಜ್ರಿವಾಲ್ ಅವರು ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ನೀಡುವ ಭರವಸೆ ನೀಡಿದ್ದಾರೆ. ಹಾಗೆಯೇ ದೆಹಲಿಯಲ್ಲಿ ಅವರ ನೇತೃತ್ವದಲ್ಲೆ ಸರ್ಕಾರವಿದೆ. ಅಲ್ಲಿ ಮಹಿಳೆಯರಿಗೆ ಈ ಮೊತ್ತವನ್ನು ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.
Advertisement
ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್‌ನಲ್ಲಿ ಅಂದಾಜು 20,000 ಕೋಟಿ ರೂ. ಮೌಲ್ಯದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಅದನ್ನು ತಡೆಯಲು ಎಎಪಿ ಸರ್ಕಾರ ಅಗತ್ಯ ಎಂದು ಹೇಳಿದ್ದರು. ಆದರೆ ಇದು ಸಾಧ್ಯವಿಲ್ಲ ಎಂದು ನವಜೋತ್ ಸಿಧು ಸಮರ್ಥಿಸಿಕೊಂಡರು. ಇದನ್ನೂ ಓದಿ: 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ
Advertisement
ಕೇಜ್ರಿವಾಲ್ ಅವರಿಗೆ ಪಂಜಾಬ್ ಬಗ್ಗೆ ಏನೂ ತಿಳಿದಿಲ್ಲ. ಸುಮ್ಮನೆ ಸುಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ನಂಬಿಸುತ್ತಿದ್ದಾರೆ. ಅವರು ಕೇವಲ ರಾಜಕೀಯ ಪ್ರವಾಸಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ: ಬಿಎಸ್‍ವೈ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬೇಳೆಕಾಳು ಹಾಗೂ ಎಣ್ಣೆ ಕಾಳುಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ನವಜೋತ್ ಸಿಧು ಭರವಸೆ ನೀಡಿದರು.