ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆ ಕಲಂ 371 ಜೆ ಅನುಷ್ಠಾನಕ್ಕೆ ಅಡ್ಡಿಯಾಗುವ ನಿಲುವನ್ನು ತಳಿದಿದ್ದು ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಅರ್ಜಿ ವಾಪಸ್ ಪಡೆಯುವಂತೆ ಆಗ್ರಹಿಸಿ ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳು ಒಂದಾಗಿ ಕಲಂ 371ಜೆ ಅನುಷ್ಠಾನ ಸಮಿತಿ ಅಡಿಯಲ್ಲಿ ರಾಯಚೂರು ನಗರ ಬಂದ್‍ಗೆ ಕರೆ ನೀಡಲಾಗಿದೆ. ಮಾರ್ಚ್ 7 ರಂದು ರಾಯಚೂರು ನಗರ ಬಂದ್ ಮಾಡಲು ನಿರ್ಧರಿಸಲಾಗಿದೆ.
Advertisement
Advertisement
ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ನಡೆಯಲಿದೆ. ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ಮುಂದುವರೆಸಿವೆ. ಸಂಸ್ಥೆಗೆ ಕಲಂ 371ಜೆ ಅನ್ವಯಿಸದಂತೆ ಕೋರ್ಟ್ ಮೊರೆ ಹೋದ ಹಿನ್ನೆಲೆ ಬಂದ್ ಕರೆ ನೀಡಲಾಗಿದೆ. ಇದನ್ನೂ ಓದಿ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖ್ಯಸ್ಥ ಪಾಣಕ್ಕಾಡ್ ತಂಙಳ್ ನಿಧನ
Advertisement
Advertisement
ಮೆಡಿಕಲ್ ಸೀಟ್ ಹಂಚಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ವರ್ಷ 106 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್ ಕೈ ತಪ್ಪುತ್ತಿತ್ತು. ಮೊದಲೇ ಸೀಟ್ ಹಂಚಿಕೆ ಹಿನ್ನೆಲೆ ಕಲಂ 371ಜೆ ಅಡಿ ಸೀಟ್ ಕೊಟ್ಟಿದ್ದಾರೆ. ಮುಂದಿನ ವರ್ಷ ವಿಶೇಷ ಸ್ಥಾನಮಾನದ ಅಡಿ ಮೆಡಿಕಲ್ ಸೀಟ್ ನೀಡದಿರಲು ಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಾಪಸ್ ಪಡೆಯುವಂತೆ ಆಗ್ರಹಿಸಿ ರಾಯಚೂರು ಬಂದ್‍ಗೆ ಕರೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?