ಮಂಗಳೂರು: ನವೋದಯ ಗ್ರಾಮ ವಿಕಾಸ ಟ್ರಸ್ಟ್ ಪ್ರವರ್ತಿತ ನವೋದಯ ಸ್ವಸಹಾಯ ಗುಂಪುಗಳ ಸ್ಥಾಪನೆಯ ರಜತ ಮಹೋತ್ಸವ ಸಮಾರಂಭ `ನವೋದಯ ರಜತ ಸಂಭ್ರಮ’ ಮೇ 10ರಂದು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದ್ದು, 1.5 ಲಕ್ಷ ಮಂದಿ ನೀಲಿ ಸಮವಸ್ತ್ರ ಧರಿಸಿ ಪಾಲ್ಗೊಳ್ಳುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ಸಂಸ್ಥಾಪಕ ಡಾ.ಎಂ.ಎನ್.ರಾಜೇಂದ್ರ ಕುಮಾರ್(Dr M N Rajendra Kumar) ತಿಳಿಸಿದ್ದಾರೆ.
ಮಂಗಳೂರಿನಲ್ಲಿ(Mangaluru) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘಟನೆ ಹಾಗೂ ಜನಜಾಗೃತಿ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದೆ. ನಮ್ಮಿಂದ, ನಮಗಾಗಿ, ನಮಗೋಸ್ಕರ ಸ್ವಸಹಾಯ ಸಂಘಗಳು ಎಂಬ ಧೋರಣೆ ಹೊಂದಿರುವ ನವೋದಯ ಸ್ವಸಹಾಯ ಗುಂಪುಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ದಾಪುಗಾಲು ಹಾಕುತ್ತಿದೆ. ಎಲ್ಲರೂ ಒಂದೇ ಎಂಬ ಸಮಾನತೆಯ ಮನೋಭಾವದೊಂದಿಗೆ ಸ್ವಸಹಾಯ ಗುಂಪಿನ 1.5 ಲಕ್ಷ ಸದಸ್ಯೆಯರು ಸಮವಸ್ತ್ರ ಧರಿಸಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನೀವು ಮೇಕಪ್ ಪ್ರಿಯರೇ? – ದೇಹದ ಹಾರ್ಮೋನ್‌ಗಳ ಮೇಲೆ ನೇರ ಎಫೆಕ್ಟ್
ಸಮಾವೇಶದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ನೆರವೇರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್(Thawar Chand Gehlot) ನವೋದಯ ರಜತ ಸಂಭ್ರಮದ ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ಬಿಡುಗಡೆಗೊಳಿಸಲಿದ್ದಾರೆ. ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಅವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನನಗೆ ನಮ್ಮ ದೇಶ ಮುಖ್ಯ, ಅದಕ್ಕೆ ಯುದ್ಧಕ್ಕೆ ಹೋಗ್ತೀನಿ ಎಂದಿದ್ದೆ: ಸಚಿವ ಜಮೀರ್
ರಜತ ಸಂಭ್ರಮದ `ಸಂತೃಪ್ತಿ’ ಸ್ಮರಣ ಸಂಚಿಕೆಯ ಬಿಡುಗಡೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivakumar) ನೆರವೇರಿಸಲಿದ್ದು, ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೆರವೇರಿಸಲಿದ್ದಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಗದು, ಟಾರ್ಚ್, ವೈದ್ಯಕೀಯ ಕಿಟ್ ಕೈಲ್ಲಿಟ್ಟುಕೊಳ್ಳಿ – ನಾಳೆ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಹೇಗಿರಲಿದೆ?
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ ಎಂದು ಹೇಳಿದರು.