ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಪೊಲೀಸರು ಬೆಳಗಾವಿ ರಾಮದೇವ ಹೋಟೆಲ್ ಬಳಿ ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಉದ್ದೇಶಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ಮಾಡಬೇಕೆಂದಿದ್ದರು. ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಕುಮಾರ ಟಾಕಳೆ ಬಂಧನಕ್ಕೆ ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಎಪಿಎಂಸಿ ಠಾಣೆ ಪೊಲೀಸರಿಂದ ನವ್ಯಶ್ರೀ ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ನವ್ಯಶ್ರೀಯನ್ನು ಬೆಳಗಾವಿ ಮಹಿಳಾ ಠಾಣೆಗೆ ಪೊಲೀಸರು ಕರೆದೊಯ್ದಿದ್ದಾರೆ. ಇದನ್ನೂ ಓದಿ: ತೆರಿಗೆ ವಿನಾಯ್ತಿ ಕೈಬಿಡಲು ಕೇಂದ್ರ ಚಿಂತನೆ – ವಿನಾಯ್ತಿ ಬೇಡ ಎಂದವರಿಗೆ ಮಾತ್ರ ಕಡಿಮೆ ತೆರಿಗೆ
ರಾಜಕುಮಾರ ಟಾಕಳೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾಗಿದ್ದಾರೆ. ಟಾಕಳೆ ವಿರುದ್ಧ ಅತ್ಯಾಚಾರ, ಕಿಡ್ನಾಪ್, ಗರ್ಭಪಾತ ಮಾಡಿಸಿದ್ದು, ಮೋಸ, ಮಹಿಳೆ ಮೇಲೆ ಹಲ್ಲೆ, ಅವಾಚ್ಯವಾಗಿ ನಿಂದಿಸುವುದು, ಜೀವ ಬೆದರಿಕೆ, ಗೌರವಕ್ಕೆ ಧಕ್ಕೆ ಹಾಗೂ ಖಾಸಗೀತನಕ್ಕೆ ಧಕ್ಕೆ ಹಾಗೂ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿರುವ ಬಗ್ಗೆ ನವ್ಯಶ್ರೀ ವಿವಿಧ ಸೆಕ್ಷನ್ ಹಾಗೂ ಆ್ಯಕ್ಟ್‌ಗಳಡಿ ಎಫ್‍ಐಆರ್ ದಾಖಲಿಸಿದ್ದರು. ಆದರೂ ಈವರೆಗೂ ಟಾಕಳೆಯನ್ನು ಬಂಧಿಸಿಲ್ಲ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 5 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ