ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಹೇಳಿದ್ದಾರೆ.
Advertisement
ಸದಾ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುವ ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಪರೋಕ್ಷವಾಗಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು. ಕಂಗನಾರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್
Advertisement
Mumbai | We strongly condemn actress Kangana Ranaut’s statement (India got freedom in 2014). She insulted freedom fighters. Centre must take back the Padma Shri from Kangana & arrest her: Maharashtra Minister Nawab Malik pic.twitter.com/xTy2VPFohk
— ANI (@ANI) November 12, 2021
Advertisement
ಇದೀಗ ಕಂಗನಾ ಹೇಳಿಕೆ ವಿರುದ್ಧ ನವಾಬ್ ಮಲ್ಲಿಕ್ ಸಿಡಿದೆದ್ದಿದ್ದು, 2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಂಗನಾ ಹೇಳಿಕೆ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ. ಹೀಗಾಗಿ ಆಕೆಗೆ ನೀಡುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ
Advertisement
ಈ ಕುರಿತಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕೂಡ ಟ್ವೀಟ್ ಮಾಡಿದ್ದು, ಮಹಾತ್ಮ ಗಾಂಧಿ ಅವರ ತ್ಯಾಗ ಬಲಿದಾನಕ್ಕೆ ಅವಮಾನಗೊಳಿಸಿಸಲಾಗಿದೆ, ಶಹೀದ್ ಮಂಗಲ್ ಪಾಂಡೆಯಿಂದ ರಾಣಿ ಲಕ್ಷ್ಮೀಬಾಯಿಯವರೆಗೆ , ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಂಗನಾ ವಿರುದ್ಧ ಆಮ್ ಆದ್ಮಿ ಪಾರ್ಟಿ ಮುಂಬೈ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ