ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮುಖ್ಯಸ್ಥ ನವಾಜ್ ಷರೀಫ್ (Nawaz Sharif), ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಪ್ರಧಾನಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ.
ಪಕ್ಷ ಅಧಿಕಾರಕ್ಕೆ ಬಂದರೆ ಪಿಒಕೆಯ ಅಭಿವೃದ್ಧಿಯನ್ನು ತಾವೇ ನೇರವಾಗಿ ನೋಡಿಕೊಳ್ಳಲು ಬಯಸುವುದಾಗಿ ಹೇಳಿದ್ದಾರೆ.
ಮುಜಫರಾಬಾದ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಪಿಒಕೆ ನನ್ನ ಎರಡನೇ ಮನೆ. ನನ್ನ ಪೂರ್ವಜರು ಕಾಶ್ಮೀರದಿಂದ ಬಂದವರು. ಪಕ್ಷ ಗೆದ್ದರೆ, ಪಿಒಕೆ ಪ್ರಧಾನಿಯನ್ನಾಗಿ ನನ್ನನ್ನು ನೇಮಿಸುವಂತೆ ಪ್ರಧಾನಿ ಶೆಹಬಾಜ್ ಷರೀಫ್ ಅವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಪಿಒಕೆಯಲ್ಲಿ ಜುಲೈ 27ರಿಂದ ಆಗಸ್ಟ್ 10ರವರೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಪಿಎಂಎಲ್-ಎನ್ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ನಡುವೆ ತೀವ್ರ ಪೈಪೋಟಿ ಇದೆ.
ಇದೇ ವೇಳೆ, ಪಿಒಕೆಯಲ್ಲಿ ಹಣದುಬ್ಬರ, ವಿದ್ಯುತ್ ದರ ಏರಿಕೆ ಮತ್ತು ಸರ್ಕಾರದ ವಿರುದ್ಧ ಜನರ ಪ್ರತಿಭಟನೆಗಳು ಮುಂದುವರಿದಿವೆ. ಜಮ್ಮು-ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (JKJAAC) ಮತ್ತೆ ಬೃಹತ್ ಪ್ರತಿಭಟನೆ ಹಾಗೂ ಮುಜಫರಾಬಾದ್‌ಗೆ ಲಾಂಗ್ ಮಾರ್ಚ್‌ಗೆ ಕರೆ ನೀಡಿದೆ.ಇದನ್ನೂ ಓದಿ: ಸೌದಿಯ ಎರಡು ಟ್ಯಾಂಕರ್‌ಗಳ ಮೇಲೆ ದಾಳಿ ನಡೆಸಿದ್ದು ನಾವೇ – ಹೊಣೆ ಹೊತ್ತ ಹೌತಿ ಬಂಡುಕೋರರು
ಭಾರತದ ನಿಲುವಿನ ಪ್ರಕಾರ, ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗಗಳಾಗಿದ್ದು, ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿದೆ. ಪಿಒಕೆಯಲ್ಲಿ ನಡೆಯುವ ಚುನಾವಣೆಗಳನ್ನು ಭಾರತ ಮಾನ್ಯತೆ ನೀಡುವುದಿಲ್ಲ ಎಂಬ ನಿಲುವನ್ನು ಹಲವು ಬಾರಿ ಸ್ಪಷ್ಟಪಡಿಸಿದೆ.ಇದನ್ನೂ ಓದಿ: ಶ್ರೀಲಂಕಾದಿಂದ 9 ಭಾರತೀಯ ಮೀನುಗಾರರ ಬಂಧನ
