ಲಂಡನ್: ಪಾಕ್ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿದ್ದೇನೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಕಿಡಿಕಾರಿದ್ದಾರೆ.
Advertisement
ಲಂಡನ್ನಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಷರೀಫ್ ಲಾಹೋರ್ನಲ್ಲಿ ನಡೆದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಸಾಮಾನ್ಯ ಸಭೆಯಲ್ಲಿ ಆನ್ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದರು. ಭಾರತದಲ್ಲಿ ಇಮ್ರಾನ್ ಖಾನ್ ಕೀಲುಗೊಂಬೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ವಡಿವೇಲುಗೆ ಕೊರೊನಾ- ಓಮಿಕ್ರಾನ್ ಸೋಂಕು ಶಂಕೆ
Advertisement
Advertisement
ದೇಶದಲ್ಲಿ ಇಮ್ರಾನ್ ಖಾನ್ ಹೇಗೆ ಅಧಿಕಾರಕ್ಕೆ ಬಂದಿದ್ದಾರೆ ಎಂಬುದು ಇಡೀ ಜಗತ್ತಿಗೇ ಗೊತ್ತಿದೆ. ಇಮ್ರಾನ್ ಜನರ ಮತಗಳ ಬದಲು ಸೇನಾ ನೆರವಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ನೆರವಿಗೆ ಹೋಗುವ ಬದಲು ಆತ್ಮಹತ್ಯೆ ಮಾಡಿಕೊಳ್ಳಲು ಇಷ್ಟಪಡುವುದುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ. ಆದರೆ ಇಮ್ರಾನ್ ಖಾನ್ ಯಾವಾಗ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಎದುರುನೋಡುತ್ತಿರುವೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 1.83 ಕೋಟಿ ಮೌಲ್ಯದ 3.6 ಕೆ.ಜಿ ಚಿನ್ನ ತಿರುಪತಿ ತಿಮ್ಮಪ್ಪನಿಗೆ ಅರ್ಪಣೆ
Advertisement
ಪಾಕಿಸ್ತಾನದಲ್ಲಿ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ದೋಷಿಯಾಗಿರುವ 71 ವರ್ಷದ ನವಾಜ್ ಷರೀಫ್, ಲಾಹೋರ್ ಹೈಕೋರ್ಟ್ ಅನುಮತಿ ನೀಡಿದ ನಂತರ ವೈದ್ಯಕೀಯ ಚಿಕಿತ್ಸೆಗಾಗಿ ನಾಲ್ಕು ವಾರಗಳ ಕಾಲ ವಿದೇಶಕ್ಕೆ ಪ್ರಯಾಣಿಸಿದ್ದರು. ನವೆಂಬರ್ 2019 ರಿಂದ ಲಂಡನ್ನಲ್ಲಿ ವಾಸವಾಗಿದ್ದಾರೆ. 2018ರಲ್ಲಿ ಸೇನೆಯ ನೆರವಿನಿಂದ ಅಧಿಕಾರಕ್ಕೆ ಬಂದ ಇಮ್ರಾನ್ ಸರ್ಕಾರ ಮೊದಲ ಮೂರು ವರ್ಷಗಳಲ್ಲಿ ವಿದೇಶಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ 34 ಬಿಲಿಯನ್ ಡಾಲರ್ಗೂ ಹೆಚ್ಚು ಸಾಲ ಪಡೆದಿದೆ ಎಂದು ಪಾಕ್ ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.