ಉಡುಪಿ: ನಕ್ಸಲೈಟನ್ನು (Naxalite) ಬೇರು ಸಮೇತ ಕಿತ್ತುಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಎನ್ ಕೌಂಟರ್ ಬಗ್ಗೆ ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ.
ಉಡುಪಿಯಲ್ಲಿ (Udupi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಕ್ಸಲೈಟ್‌ಗಳನ್ನು ಕಟ್ಟಿ ಹಾಕಬೇಕು. ಇದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷದಿಂದ ಯತ್ನಾಳ್ ಉಚ್ಚಾಟಿಸಿ; ಬಿಜೆಪಿ ಕಾರ್ಯಕರ್ತರಿಂದ ಆಗ್ರಹ
Advertisement
Advertisement
ವಿಕ್ರಂಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇತ್ತು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದಾರೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಪ್ರಾಣಹಾನಿ ಆಗುತ್ತಿತ್ತು. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ಮತ್ತೆ ಸ್ಪಷ್ಟನೆ ಕೊಡಲು ನಾವು ತಯಾರಿದ್ದೇವೆ. ನ್ಯಾಯಾಂಗ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ. ನ್ಯಾಯಾಂಗ ತನಿಖೆಗೆ ಕೊಡುವುದು ಸರ್ಕಾರದ ತೀರ್ಮಾನ. ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರ ಬಳಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ – ಚಂದ್ರಶೇಖರ ಸ್ವಾಮೀಜಿ ಯೂಟರ್ನ್
Advertisement