ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಶರಣಾದ ನಕ್ಸಲರು ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿದ್ದರು ಎನ್ನಲಾದ ಶಸ್ತ್ರಾಸ್ತ್ರಗಳು (Naxalite weapons) ಪತ್ತೆಯಾಗಿವೆ.
Advertisement
ಚಿಕ್ಕಮಗಳೂರು (Chikkamagaluru) ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ ಗೊತ್ತಾಗಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಎಸ್ಟೇಟ್ ಮ್ಯಾನೇಜರ್ ಮೇಲೆ ಅಕ್ರಮ ಬಾಂಗ್ಲಾ ವಲಸಿಗರಿಂದ ಕಲ್ಲು ತೂರಾಟ
Advertisement
Advertisement
1 ಎಕೆ-47, 303 ಕೋವಿ 5, ಒಂದು ಪಿಸ್ತೂಲ್, 100ಕ್ಕೂ ಹೆಚ್ಚು ಗುಂಡುಗಳು ಮೇಗೂರು ಅರಣ್ಯ ವ್ಯಾಪ್ತಿಯ ಕಿತ್ತಲೆಗಂಡಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿವೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಅಪರಿಚಿತರ ಆಯುಧಗಳು ಎಂದು ಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ನಕ್ಸಲರು ಚೀನಾ, ಪಾಕ್‌ನಿಂದ ಸಹಾಯ ಪಡೆದಿದ್ದಾರೆ: ಸಿ.ಟಿ ರವಿ ಗಂಭೀರ ಆರೋಪ
Advertisement
ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದರು. ಕೆಲವರು ಅರಣ್ಯದ (Forest) ರಹಸ್ಯ ಸ್ಥಳದಲ್ಲಿ ಅಡಗಿಸಿ ಇಟ್ಟಿರುವುದಾಗಿ ತಿಳಿದುಬಂದಿತ್ತು. ಈ ಸ್ಥಳಗಳ ಮಾಹಿತಿ ಪೊಲೀಸರಿಗೆ ಇರಲಿಲ್ಲ. ಹೀಗಾಗಿ ಪೊಲೀಸರು ಬಾಡಿ ವಾರಂಟ್ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿತ್ತು.
ಪರಪ್ಪನ ಅಗ್ರಹಾರದಲ್ಲಿ ನಕ್ಸಲರು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರ ಎದುರು ಬುಧವಾರ ರಾತ್ರಿ ಶರಣಾದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್. ಜಿಶಾ, ಕೆ.ವಸಂತ್, ಮಾರೆಪ್ಪ ಅರೋಲಿ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಶರಣಾದ ನಕ್ಸಲರಿಗೆ ಎಷ್ಟು ಹಣ ಸಿಗುತ್ತೆ? ಸರ್ಕಾರದ ಪ್ಯಾಕೇಜ್ ಏನು?
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರ ನೇತ್ವತ್ವದಲ್ಲಿ ಗುರುವಾರ ನಗರದದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರು ಮಂದಿಯನ್ನು ಜನವರಿ 30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ನಂತರ ಪೊಲೀಸರು 6 ಮಂದಿ ನಕ್ಸಲರನ್ನು ಬಿಗಿ ಭದ್ರತೆ ನಡುವೆ ಗುರುವಾರ ರಾತ್ರಿ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹಕ್ಕೆ ಬಿಟ್ಟು ಬಂದಿದ್ದಾರೆ.
ಆರು ಮಂದಿ ನಕ್ಸಲರ ವಿರುದ್ಧವೂ ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ’(ಯುಎಪಿಎ) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.