ಚಂಡೀಗಢ: ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ (Haryana) ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಪಂಚಕುಲದಲ್ಲಿ (Panchkula) ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವೀಕ್ಷಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಅನಿಲ್ ವಿಜ್ ಮತ್ತು ಕೃಷ್ಣಾ ಬೇಡಿ ಅವರು ನಯಾಬ್ ಸಿಂಗ್ ಸೈನಿ ಅವರ ಹೆಸರಿನ ಪ್ರಸ್ತಾವನೆ ಮುಂದಿಟ್ಟರು. ಪ್ರಸ್ತಾವನೆಗೆ ಅವಿರೋಧವಾಗಿ ಶಾಸಕರು ಬೆಂಬಲ ಸೂಚಿಸಿದ ಹಿನ್ನೆಲೆ ಸೈನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಯಿತು. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ
Advertisement
Advertisement
ಗುರುವಾರ ಬೆಳಗ್ಗೆ 11:30ಕ್ಕೆ ಪಂಚಕುಲದಲ್ಲಿ ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಪುದುಚೆರಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ
Advertisement
ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಡೋಲಿ ಮಾತನಾಡಿ, ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ 37 ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಇವರಲ್ಲಿ ಕೇಂದ್ರ ಸಚಿವರು, ಎನ್‌ಡಿಎ ಘಟಕಗಳ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದ್ದಾರೆ. ನಾವು ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇವೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾರ್ಯಕ್ರಮ ಆರಂಭವಾಗಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ – ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ
Advertisement
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನಯಾಬ್ ಸಿಂಗ್ ಸೈನಿ, ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ಜನರು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಮೂರನೇ ಬಾರಿಗೆ ಅಧಿಕಾರ ನೀಡಿದ್ದಾರೆ. 24,000 ಯುವಕರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಮೊದಲು ಪ್ರಕಟಿಸಿ ನಂತರ ಪ್ರಮಾಣ ವಚನ ಸ್ವೀಕರಿಸುವುದಾಗಿ ಘೋಷಿಸಿದ್ದೆ. ಆ ಭರವಸೆಯಂತೆ ನಾಳೆ (ಗುರುವಾರ) ಫಲಿತಾಂಶ ಪ್ರಕಟಿಸಲಾಗುವುದು. ಬಿಜೆಪಿ ಹೇಳಿದ್ದನ್ನೇ ಮಾಡುತ್ತದೆ ಎಂದರು. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿ: ಚಾಲಕನ ಕೈ ಮುರಿತ, ಹಲವರಿಗೆ ಗಾಯ