ಮದುವೆಯಾದ ಮೂರೇ ತಿಂಗಳಿಗೆ ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan), ನಟಿ ನಯನತಾರಾ (Nayanthara) ದಂಪತಿ ಅಭಿಮಾನಿಗಳಿಗಾಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಯನತಾರ ಅವಳಿ ಮಕ್ಕಳ ತಾಯಿ ಎಂದು ಇನ್ಸ್ಟಾದಲ್ಲಿ ದಂಪತಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅರೇ, ಮದುವೆಯಾದ ಮೂರೇ ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವವರಿಗೆ ಉತ್ತರವನ್ನೂ ಕೊಟ್ಟಿರುವ ದಂಪತಿ, ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪಾಲಕರಾಗಿದ್ದಾರೆ ಈ ಜೋಡಿ.
View this post on Instagram
ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ದರು. ಇದನ್ನೂ ಓದಿ: ಪವನ್ ಕುಮಾರ್-ಫಾಸಿಲ್ ಕಾಂಬಿನೇಷನ್ನ ‘ಧೂಮ್ʼ ಚಿತ್ರದ ಅದ್ಧೂರಿ ಮುಹೂರ್ತ
ಮಾರ್ಚ್ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಗಿತ್ತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.
ಇತ್ತೀಚೆಗಷ್ಟೇ ಈ ದಂಪತಿ ಹನಿಮೂನ್ಗೆ ಹೋದಾಗಲೂ ಮಗುವಿನ ಪಾದಗಳಿರುವ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆಗಲೂ ಕೂಡ ಅಷ್ಟೇ ಕುತೂಹಲಕ್ಕೆ ಕಾರಣವಾಗಿತ್ತು ಆ ಪೋಸ್ಟ್. ಇದೀಗ ಅದು ಕೂಡ ನಿಜವಾಗಿದೆ. ಅಭಿಮಾನಿಗಳು ಮತ್ತು ಆಪ್ತರು ಈ ಜೋಡಿಗೆ ಶುಭಾಶಯ ಹೇಳುತ್ತಿದ್ದಾರೆ. ಇದನ್ನೂ ಓದಿ: `ಗಂಧದಗುಡಿ’ ಪ್ರೀ ರಿಲೀಸ್ ಇವೆಂಟ್ಗೆ ಭರ್ಜರಿ ತಯಾರಿ