BollywoodCinemaLatestMain PostSouth cinema

ನಯನತಾರಾ- ವಿಘ್ನೇಶ್ ಶಿವನ್ ಮದುವೆಗೆ ಕ್ಷಣಗಣನೆ

ಕಾಲಿವುಡ್‌ನಲ್ಲಿ ಸದ್ಯ ಸೌಂಡ್ ಮಾಡುತ್ತಿರೋ ಸುದ್ದಿ ಅಂದ್ರೆ ನಯನತಾರಾ ಮತ್ತು ವಿಘ್ನೇಶ್ ಮದುವೆ ವಿಚಾರ. ನಯನತಾರಾ ಮದುವೆ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. ಮದುವೆಯ ಆಮಂತ್ರಣ ಮತ್ತು ಸ್ಟಾರ್ ಜೋಡಿಯ ಮದುವೆ ಯಾರೆಲ್ಲಾ ಬರುತ್ತಾರೆ ಎಂಬೆಲ್ಲಾ ಮಾಹಿತಿ ಇಲ್ಲಿದೆ ನೋಡಿ.

ಸೌತ್ ಸಿನಿರಂಗದಲ್ಲಿ ಸದ್ಯ ಹಸೆಮಣೆ ಏರುತ್ತಿರೋ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಗೆ ಇದೀಗ ಒಂದೇ ದಿನ ಬಾಕಿ ಇದೆ. `ರೌಡಿ ಧಾನ್’ ಚಿತ್ರದ ಸೆಟ್‌ನಲ್ಲಿ ಮೊದಲ ಬಾರಿಗೆ ಭೇಟಿಯಾದ ಜೋಡಿ, ಅಲ್ಲಿಂದ ಶುರುವಾದ ಸ್ನೇಹ ನಂತರ ಪ್ರೀತಿಗೆ ತಿರುಗಿ ಇದೀಗ 7 ವರ್ಷಗಳ ನಂತರ ಹಸೆಮಣೆ ಏರಲು ಸಜ್ಜಾಗಿದ್ದಾರೆ. ತಮ್ಮ ಮತ್ತು ನಯನತಾರಾ ಮದುವೆಯ ವಿಚಾರದ ಜತೆ ನಟ ಅಜಿತ್‌ಗೆ ನಿರ್ದೇಶನ ಮಾಡುತ್ತಿರುವುದಾಗಿ ಅಧಿಕೃತವಾಗಿ ವಿಘ್ನೇಶ್ ತಿಳಿಸಿದ್ದರು.

ಇದೇ ಜೂನ್ 9ರಂದು ನಯನತಾರಾ ಮತ್ತು ವಿಘ್ನೇಶ್ ಶಿವನ್ ಮಹಾಬಲಿಪುರಂನಲ್ಲಿ ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಲಿದ್ದಾರೆ. ಜೂನ್ 7ರಂದು ಹಳದಿ ಶಾಸ್ತ್ರ ನೆರವೇರಿದ್ದು, ಜೂನ್ 8ರಂದು ಮೆಹೆಂದಿ ಶಾಸ್ತ್ರ ನಡೆಯುತ್ತಿದೆ. ಜೂನ್ 9ರಂದು ಮಹಾಬಲಿಪುರಂನ ಶೆರಾಟನ್ ಗ್ರ್ಯಾಂಡ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆಯ ಬಳಿಕ ಚೆನ್ನೈನಲ್ಲಿ ಚಿತ್ರರಂಗದ ಸ್ನೇಹಿತರಿಗೆ ಮತ್ತು ಮಾಧ್ಯಮ ಮಿತ್ರರಿಗೆ ಅದ್ದೂರಿ ಆರತಕ್ಷತೆ ಏರ್ಪಡಿಸಲಾಗಿದೆ. ಇದನ್ನೂ ಓದಿ:ಉಪೇಂದ್ರ- ಸುದೀಪ್ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್

ನಯನತಾರಾ ಮದುವೆಗೆ ಸಿಎಂ ಸ್ಟಾಲಿನ್, ರಜನಿಕಾಂತ್, ಅಬಿರುದ್ಧ, ಸಮಂತಾ, ಕಮಲ್ ಹಾಸನ್, ಚಿರಂಜೀವಿ, ಸೂರ್ಯ, ಜ್ಯೋತಿ, ಕಾತೀ, ವಿಜಯ್ ಸೇತುಪತಿ, ಹೀಗೆ ಸಾಕಷ್ಟು ಸೆಲೆಬ್ರಿಟಿ ಸ್ನೇಹಿತರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಇನ್ನು ನಯನತಾರಾ ಮದುವೆ ಆಮಂತ್ರಣ ಕೂಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇನ್ನು ನೆಚ್ಚಿನ ಜೋಡಿಯ ಮದುವೆಯನ್ನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾಯ್ತಿದ್ದಾರೆ.

Leave a Reply

Your email address will not be published.

Back to top button