ನವದೆಹಲಿ: ನಯಾರಾ ಎನರ್ಜಿ (Nayara Energy) ಬುಧವಾರ ದೇಶಾದ್ಯಂತ ತನ್ನ ಇಂಧನ ಕೇಂದ್ರಗಳಲ್ಲಿ ಪೆಟ್ರೋಲ್ (Petrol) ಬೆಲೆಯನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್ (Diesel) ಬೆಲೆಯನ್ನು ಲೀಟರ್‌ಗೆ 3 ರೂ. ಇಳಿಸಿದೆ.
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿದ್ದು, ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿ ಇಳಿಕೆಯಾಗಿದೆ. ಹೀಗಾಗಿ, ದೇಶಾದ್ಯಂತ ನಯಾರಾದ 7,000 ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಆದರೂ, ಅಂತಿಮ ಚಿಲ್ಲರೆ ಬೆಲೆ ವ್ಯಾಟ್‌ನಂತಹ ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರದಲ್ಲಿ ಬದಲಾಗುತ್ತವೆ. ಇದನ್ನೂ ಓದಿ: ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಅಂತ್ಯಗೊಂಡು ಪ್ರಮುಖ ಸಮುದ್ರ ಮಾರ್ಗವನ್ನು ಮತ್ತೆ ತೆರೆದ ನಂತರ ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಪೂರೈಕೆಯನ್ನು ಪುನಃಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ. ಇತ್ತೀಚಿನ ವಾರಗಳಲ್ಲಿ ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಕಡಿಮೆಯಾಗಿದೆ.
ಆದಾಗ್ಯೂ, ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳು ಇದನ್ನು ಅನುಸರಿಸಿಲ್ಲ. ಭಾರತದ ಒಂದು ಲಕ್ಷಕ್ಕೂ ಹೆಚ್ಚು ಇಂಧನ ಕೇಂದ್ರಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಯಾವುದೇ ಬದಲಾವಣೆಯಿಲ್ಲದೆ ಉಳಿಸಿಕೊಂಡಿವೆ. ದೆಹಲಿಯಲ್ಲಿ, ಐಒಸಿ ಔಟ್‌ಲೆಟ್‌ಗಳಲ್ಲಿ ಪೆಟ್ರೋಲ್ ಲೀಟರ್‌ಗೆ 102.12 ರೂ. ಮತ್ತು ಡೀಸೆಲ್ ಲೀಟರ್‌ಗೆ 95.20 ರೂ.ಗೆ ಮಾರಾಟವಾಗುತ್ತಿದೆ. ಇದನ್ನೂ ಓದಿ: ಪಂಜಾಬ್, ಹರಿಯಾಣ ನಡುವೆ ಹೊಸ ಜಲಸಮರ – 2,300 ಕೋಟಿ ರೂ. ವೆಚ್ಚದ ಮಾಳ್ವಾ ಕಾಲುವೆ ಯೋಜನೆ ಏನು?
ಇರಾನ್ ಸಂಘರ್ಷವು ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳಲ್ಲಿ ತೀವ್ರ ಏರಿಕೆಗೆ ಕಾರಣವಾದ ನಂತರ, ಮಾರ್ಚ್ 26 ರಂದು ನಯಾರಾ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂ. ಹೆಚ್ಚಿಸಿತ್ತು. ನಂತರ ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳು ಮೇ ತಿಂಗಳ ದ್ವಿತೀಯಾರ್ಧದಲ್ಲಿ ಬಹು ಪರಿಷ್ಕರಣೆಗಳ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 7.50 ರೂ.ಗಳಷ್ಟು ಹೆಚ್ಚಿಸಿದ್ದರು.

