ಲಂಡನ್: ಇಂಗ್ಲೆಂಡ್ ಮತ್ತು ಭಾರತ ನಡುವೆ ಜುಲೈ 7 ರಿಂದ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾದ ಕೋಚ್ ಆಗಿ ಎನ್‍ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.
Advertisement
ಇದೀಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಅಂತ್ಯಗೊಂಡ ಬಳಿಕ 3 ಪಂದ್ಯಗಳ ಟಿ20 ಸರಣಿ ಜುಲೈ 7 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾದ ಖಾಯಂ ಕೋಚ್ ರಾಹುಲ್ ದ್ರಾವಿಡ್ ಸಹಿತ ಆಟಗಾರರಾದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರಿಷಭ್ ಪಂತ್ ಸಹಿತ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಹಾಗಾಗಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ತಂಡದಲ್ಲಿರುವ ಸಾಧ್ಯತೆ ಇದೆ. ಇದನ್ನೂ ಓದಿ: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಕೋವಿಡ್‌ನಿಂದ ಗುಣಮುಖ – T20ಗೆ ಲಭ್ಯ
Advertisement
Advertisement
ಲಕ್ಷ್ಮಣ್ ಈಗಾಗಲೇ ಟೀಂ ಇಂಡಿಯಾದೊಂದಿಗೆ ಇಂಗ್ಲೆಂಡ್‍ನಲ್ಲಿದ್ದಾರೆ. ಅಲ್ಲದೇ ಲಕ್ಷ್ಮಣ್ ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಈ ಸರಣಿಯಲ್ಲಿ ಭಾರತ ತಂಡ 2-0 ಅಂತರದಲ್ಲಿ ಗೆದ್ದಿತ್ತು. ಆ ಬಳಿಕ ಇಂಗ್ಲೆಂಡ್‍ನಲ್ಲಿ ಭಾರತ ತಂಡ ಟೆಸ್ಟ್ ಸರಣಿ ಆಡುತ್ತಿದ್ದಂತೆ ಇನ್ನೊಂದು ತಂಡ ಟಿ20 ಸರಣಿಗಾಗಿ ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಈ ತಂಡಕ್ಕೆ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಸುಮ್ನೆ ಬ್ಯಾಟಿಂಗ್ ಮಾಡ್ ಗುರು – ಬೈರ್‌ಸ್ಟೋವ್ ಜೊತೆ ವಾಗ್ವಾದಕ್ಕಿಳಿದ ಕೊಹ್ಲಿ
Advertisement
ಜುಲೈ 7, 9 ಮತ್ತು 10 ರಂದು ಮೂರು ಟಿ20 ಪಂದ್ಯಗಳು ನಡೆಯಲಿದೆ. ಈಗಾಗಲೇ ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಕೊರೊನಾದಿಂದ ಚೇತರಿಕೆ ಕಂಡು ತಂಡವನ್ನು ಮುನ್ನಡೆಸಲು ಸಿದ್ಧತೆಯಲ್ಲಿದ್ದಾರೆ.