– ಆರೋಗ್ಯ ಸ್ಥಿತಿ ಬಗ್ಗೆ ಮಗಳು ಸುಪ್ರಿಯಾ ಸುಳೆ ಮಾಹಿತಿ
ಪುಣೆ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಸಂಸ್ಥಾಪಕ ಶರದ್ ಪವಾರ್ (Sharad Pawar) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಪುಣೆಯ (Pune) ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಮ್ಮು ಮತ್ತು ಎದೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ಶರದ್ ಪವಾರ್ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪುತ್ರಿ ಹಾಗೂ ಎನ್ಸಿಪಿ (ಎಸ್ಪಿ) ಸಂಸದೆ ಸುಪ್ರಿಯಾ ಸುಳೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ತಣಿಸಲು ಕುಮಾರಸ್ವಾಮಿ ಮೇಲೆ ಸ್ಟಿಂಗ್ ಆರೋಪ: ಶ್ರೀರಾಮುಲು
ಶರದ್ ಪವಾರ್ ಅವರ ಆರೋಗ್ಯದ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸುಪ್ರಿಯಾ ಸುಳೆ, ತಂದೆಗೆ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದ್ದು, ಅವರ ಆರೋಗ್ಯದ ಎಲ್ಲ ಪ್ರಮುಖ ಮಾನದಂಡಗಳು ಸ್ಥಿರವಾಗಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ – ದಿಲ್ಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ
ಶರದ್ ಪವಾರ್ ಅವರಿಗೆ ಉಸಿರಾಡುವಾಗ ಹೆಚ್ಚಾಗುವ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ನಿಗಾದ ಉದ್ದೇಶದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಧು-ವರನಿಗೆ ನಂದಿನಿ ಹಾಲು – ಮೊಸರು ಗಿಫ್ಟ್ ಕೊಟ್ಟು ಸರ್ಕಾರದ ವಿರುದ್ಧ ಆಕ್ರೋಶ
ರೂಬಿ ಹಾಲ್ ಕ್ಲಿನಿಕ್ನ ಮುಖ್ಯ ಹೃದ್ರೋಗ ತಜ್ಞ ಹಾಗೂ ಅಧ್ಯಕ್ಷ ಡಾ. ಪರ್ವೇಜ್ ಕೆ. ಗ್ರಾಂಟ್ ಮಾತನಾಡಿ, ಶರದ್ ಪವಾರ್ ಅವರ ಆರೋಗ್ಯ ಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್ – ಕೃಪಾ ಆಳ್ವಾ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು
ಈ ವರ್ಷ ಮೂರನೇ ಬಾರಿ ಆಸ್ಪತ್ರೆಗೆ ದಾಖಲು:
85 ವರ್ಷದ ಶರದ್ ಪವಾರ್ ಅವರು ಈ ವರ್ಷ ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೂ ಮೊದಲು ಫೆಬ್ರವರಿ ತಿಂಗಳಿನಲ್ಲಿ ಎರಡು ಬಾರಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದನ್ನೂ ಓದಿ: ಬಚ್ಚನ್ ಮನೆ ಮೇಲೆ ಬಾಂಬ್ ಬೆದರಿಕೆ – ಬುಲೆಟ್ಪ್ರೂಫ್ ಗ್ಲಾಸ್ ಭದ್ರತೆಯಲ್ಲಿ ಫ್ಯಾನ್ಸ್ ಮೀಟಾದ ಬಿಗ್ ಬಿ
ಫೆಬ್ರವರಿ 9ರಂದು ನಿರಂತರ ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ರೂಬಿ ಹಾಲ್ ಕ್ಲಿನಿಕ್ಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ಎದೆ ಸೋಂಕು ಇರುವುದನ್ನು ಪತ್ತೆಹಚ್ಚಿ, ಹೆಚ್ಚಿನ ನಿಗಾದಲ್ಲಿ ಚಿಕಿತ್ಸೆ ನೀಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಇದನ್ನೂ ಓದಿ: ನ.5ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಬಿಕೆ ಹರಿಪ್ರಸಾದ್
ಆದರೆ, ಫೆಬ್ರವರಿ 22ರಂದು ಮತ್ತೆ ಸೌಮ್ಯ ನಿರ್ಜಲೀಕರಣದ ಸಮಸ್ಯೆಯಿಂದ ಅದೇ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿರವಾಗಿದ್ದು, ಅಭಿದಮನಿ ಮೂಲಕ ದ್ರವಾಹಾರ ನೀಡಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡ ಬಳಿಕ ಫೆಬ್ರವರಿ 26ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಸದ್ಯ ಅವರ ಆರೋಗ್ಯದ ಬಗ್ಗೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ʻಈ ವಯಸ್ಸಲ್ಲಿ ಮಗನ ಅಂತ್ಯಕ್ರಿಯೆ ಮಾಡಬೇಕಾಗಿ ಬಂತುʼ – ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸುಧೀರ್ ನೆನೆದು ಕಣ್ಣೀರಿಟ್ಟ ತಂದೆ
