LatestLeading NewsMain PostNational

ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

Advertisements

ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.

ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದು ನಡೆಸಿದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ಸಭೆಯಲ್ಲಿ ನಾನು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಏಕೆಂದರೆ ಸಕ್ರೀಯ ರಾಜಕಾರಣದ ಇನ್ನಿಂಗ್ಸ್ ಇನ್ನೂ ಇದೆ. ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

ಎನ್‌ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಮುಖ ಪ್ರಕ್ಷಗಳು ಒಮ್ಮತದ ನಿರ್ಧಾರ ಕೈಗೊಂಡಿದ್ದವು. ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದ್ದರು.

ಅದಕ್ಕಾಗಿಯೇ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಗೆ ಆಹ್ವಾನಿಸಿದ್ದರು. ಟಿಎಂಸಿ, ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಸಿಪಿಐಎಂಎಲ್, ಆರ್‌ಎಸ್‌ಪಿ, ಶಿವಸೇನಾ, ಎನ್‌ಸಿಪಿ, ಆರ್‌ಜೆಡಿ, ಎಸ್‌ಪಿ, ನ್ಯಾಶನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿಎಸ್‌, ಡಿಎಂಕೆ, ಆರ್‌ಎಲ್‌ಡಿ, ಐಯುಎಂಎಲ್, ಜೆಎಂಎಂ ಸೇರಿದಂತೆ 17 ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

Live Tv

Leave a Reply

Your email address will not be published.

Back to top button