ಬೆಂಗಳೂರು: ಕಾವಲ್ ಬೈರಸಂದ್ರದಲ್ಲಿರುವ ಮುಸ್ಲಿಮ್ ಸಮುದಾಯಕ್ಕೆ (Muslim Community) ಸೇರಿದ ಅನಾಥಾಶ್ರಮದ (Orphanage) ಮೇಲೆ ರಾಷ್ಟ್ರೀಯ ಮಕ್ಕಳ ಆಯೋಗ (NCPCR) ದಾಳಿ ನಡೆಸಿದೆ.
200 ಅನಾಥ ಮಕ್ಕಳನ್ನು ಶಾಲೆಗೆ ಕಳಿಸದೇ ಇಸ್ಲಾಮಿಕ್ ಶಿಕ್ಷಣ (Islamic education) ನೀಡಲಾಗುತ್ತಿದೆ ಎಂದು ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ (Priyank Kanoongo) ಆರೋಪಿಸಿದ್ದಾರೆ. ತಾಲಿಬಾನಿ ಮಾದರಿಯಲ್ಲಿ ಇಲ್ಲಿ ಮಕ್ಕಳು ಬದುಕುವಂತಾಗಿದೆ. ಮೂಲಭೂತ ಸೌಕರ್ಯಗಳನ್ನು ಮಕ್ಕಳಿಗೆ ಕಲ್ಪಿಸಿಲ್ಲ. ಮಕ್ಕಳನ್ನು ಕೂಡಿ ಹಾಕಲಾಗಿದೆ ಎಂದು ಆಪಾದಿಸಿದ್ದಾರೆ.
ಖುದ್ದು ನಾನೇ ಹೋಗಿ ಸ್ಥಳ ಪರಿಶೀಲನೆ ಮಾಡಿದ್ದೇನೆ. ಅಲ್ಲಿ ಸ್ಪಷ್ಟವಾಗಿ ಕಾನೂನು ಉಲ್ಲಂಘನೆ ಮಾಡಿ ಮಕ್ಕಳನ್ನು ಕೂಡಿ ಹಾಕಿ ಹಾಕಲಾಗಿದೆ. ಎಫ್‌ಐಆರ್ ದಾಖಲಿಸುವಂತೆ ನಾವು ಕರ್ನಾಟಕ ಸರ್ಕಾರದ (Karnataka Government) ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡುತ್ತಿದ್ದೇವೆ. ಮುಂದಿನ ಕ್ರಮಕ್ಕೆ ನಾವು ಆಗ್ರಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಈ ಆರೋಪವನ್ನು ಅನಾಥಾಶ್ರಮದ ಟ್ರಸ್ಟಿ ಅಶ್ರಫ್ ಖಾನ್ ಅಲ್ಲಗಳೆದಿದ್ದಾರೆ. ಅನಾಥಾಶ್ರಮದಲ್ಲಿ ಮಕ್ಕಳಿಗೆ ಎಲ್ಲಾ ಸೌಲಭ್ಯ ಕಲ್ಪಿಸಿದ್ದೇವೆ. ಶಾಲೆಯಲ್ಲಿ ಓದಿಸಲು ನಮ್ಮಲ್ಲಿ ಹಣವಿಲ್ಲ. ಅದಕ್ಕೆ ನಾವೇ ಇಸ್ಲಾಮಿಕ್ ಶಿಕ್ಷಣ ಕೊಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಆಯೋಗದವರು ಸುಳ್ಳು ಆರೋಪ ಮಾಡಿದ್ದಾರೆ. ಅನಾಥಶ್ರಮದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ. ಪಕ್ಕದ ಶಾಲೆಯಲ್ಲಿ ಮಕ್ಕಳನ್ನು ಓದಿಸಲು ಹಣವಿಲ್ಲ. ಈ ಅನಾಥಾಶ್ರಮದಲ್ಲಿ ಇಸ್ಲಾಮಿಕ್ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಹೇಳಿದರು.