ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಅಜಿತ್ ಪವಾರ್ (Ajit Pawar) ನೇತೃತ್ವದಲ್ಲಿ 29 ಶಾಸಕರು, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಬಣದ ಜೊತೆ ಕೈ ಜೋಡಿಸಿದ್ದಾರೆ.
ಮಹಾರಾಷ್ಟ್ರ ರಾಜಕೀಯ ಇತಿಹಾಸದಲ್ಲಿ ಶಿವಸೇನೆಯ ಏಕನಾಥ್ ಶಿಂಧೆ ಬಣ, ಬಿಜೆಪಿ ಹಾಗೂ ಎನ್‌ಸಿಪಿ ಅಜಿತ್ ಪವಾರ್ ಬಣ ಕೈ ಜೋಡಿಸಿ ಸರ್ಕಾರ ನಡೆಸುತ್ತಿದೆ. 29 ಶಾಸಕರ ಬೆಂಬಲದೊಂದಿಗೆ ರಾಜಭವನ ತಲುಪಿದ ಪವಾರ್ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: ಜನಾಂಗೀಯ ಸಂಘರ್ಷದ ಹಿಂದೆ ವಿದೇಶಗಳ ಹಸ್ತಕ್ಷೇಪ – ಮಣಿಪುರ ಸಿಎಂ ಬಿರೇನ್ ಸಿಂಗ್ ಅನುಮಾನ
ಸಿಎಂ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನಾವೀಸ್ ಸಮ್ಮುಖದಲ್ಲಿ ಪವಾರ್ ಸೇರಿದಂತೆ ಇತರ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಶರದ್ ಪವಾರ್ ಏಕಪಕ್ಷೀಯ ನಿರ್ಧಾರಗಳ ಹಿನ್ನಲೆಯಲ್ಲಿ ಎನ್‌ಸಿಪಿಯಲ್ಲಿ ಬಿರುಕು ಏರ್ಪಟ್ಟಿದೆ.
ಪಾಟ್ನಾದಲ್ಲಿ ವಿಪಕ್ಷಗಳ ಸಭೆಯಲ್ಲಿ ಭಾಗಿಯಾಗುವ ವಿಚಾರ ಮತ್ತು ಹಾಗೂ ರಾಹುಲ್ ಗಾಂಧಿ ಜೊತೆಗೆ ಕೈ ಜೋಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶರದ್ ಪವರ್ ನಿರ್ಧಾರ ತೆಗೆದುಕೊಂಡಿದ್ದರು. ಶಾಸಕರ ಅಭಿಪ್ರಾಯ ಪಡೆಯದೇ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಹಿನ್ನಲೆಯಲ್ಲಿ ಸಿಟ್ಟಾದ ಶಾಸಕರು ಅಜಿತ್ ಪವಾರ್ ಅವರನ್ನು ಬೆಂಬಲಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹೆದ್ದಾರಿ ವಿಸ್ತರಣೆಗೆ ದೇವಸ್ಥಾನ, ದರ್ಗಾ ಕಟ್ಟಡಗಳ ತೆರವು
ಎನ್‌ಸಿಪಿ ಒಟ್ಟು 53 ಶಾಸಕರ ಪೈಕಿ 29 ಶಾಸಕರು ಅಜಿತ್ ಪವಾರ್ ನೇತೃತ್ವದಲ್ಲಿ ಶಿಂಧೆ ಸರ್ಕಾರವನ್ನು ಬೆಂಬಲಿಸಿದ್ದಾರೆ. ಶರದ್ ಪವಾರ್‌ಗೆ ಸೆಡ್ಡು ಹೊಡೆದ ಅಜಿತ್ ಪವಾರ್‌ಗೆ ಬೆಂಬಲ ಘೋಷಿಸಿದ್ದಾರೆ. ಏಕನಾಥ್ ಶಿಂಧೆಯಿಂದ ಶಿವಸೇನಾ ಒಡೆದು ಚೂರಾಯಿತು. ಅಂತೆಯೇ ಈಗ ಅಜಿತ್ ಪವಾರ್‌ನಿಂದ ಎನ್‌ಸಿಪಿ ಇಬ್ಭಾಗವಾಗಿದೆ.
Web Stories