ಬೆಂಗಳೂರು: ಚನ್ನಪಟ್ಟಣದಲ್ಲಿ ಎನ್‌ಡಿಎ (NDA) ಮೈತ್ರಿ ಅಭ್ಯರ್ಥಿಯಾಗುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.
ಚನ್ನಪಟ್ಟಣ (Channapatna) ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಟಿಕೆಟ್ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಬಿಜೆಪಿ-ಜೆಡಿಎಸ್ ನಾಯಕರು ದೆಹಲಿಯಲ್ಲಿ ಮಾತನಾಡಿದ್ದಾರೆ. ಇನ್ನು ಚುನಾವಣೆ ಘೋಷಣೆ ಆಗಿಲ್ಲ. ಉಪ ಚುನಾವಣೆ ದಿನಾಂಕ ಘೋಷಣೆ ಆಗಲಿ. ಎನ್‌ಡಿಎ ಅಭ್ಯರ್ಥಿ ಅವರೇ ಚನ್ನಪಟ್ಟಣದ ಅಭ್ಯರ್ಥಿ ಆಗುತ್ತಾರೆ. ಯೋಗೇಶ್ವರ್ ಅವರು ಕೂಡಾ ಹೇಳಿದ್ದಾರೆ. ಅವರು ಅವರ ಬೆಂಬಲಿಗರ ಜೊತೆ ಸಭೆ ಮಾಡಿ ಎನ್‌ಡಿಎ ಅಭ್ಯರ್ಥಿಗೆ ಶಕ್ತಿ ತುಂಬಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ
ಚನ್ನಪಟ್ಟಣದಲ್ಲಿ ಜೆಡಿಎಸ್ ನಗರ ಸಭೆ ಸದಸ್ಯರು ಕಾಂಗ್ರೆಸ್‌ಗೆ ಆಪರೇಷನ್ ಆಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶುಕ್ರವಾರ ನಾನು ನಗರಪಾಲಿಕೆ ಸದಸ್ಯರ ಜೊತೆ ಮಾತುಕತೆ ಮಾಡಿದ್ದೇನೆ. ಸಾಕಷ್ಟು ಜನ ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅವರು ಆಮಿಷ ಒಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇವೆಲ್ಲವನ್ನು ಸರಿ ಮಾಡೋಕೆ ಶುಕ್ರವಾರ ತೋಟದ ಮನೆಯಲ್ಲಿ ಸಭೆ ಮಾಡಿದ್ದೇನೆ. ಅತೀ ಶೀಘ್ರದಲ್ಲೇ ಕೆಲವು ಗುಡ್ ನ್ಯೂಸ್ ಕೊಡುತ್ತೇನೆ. ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಗ್ರಾಮ ತೊರೆದು ಬಂಧನ ಭೀತಿಯಲ್ಲಿ ಯುವಕ ಸಾವು