ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ (Maharashtra Election) ಮತ ಎಣಿಕೆಯಲ್ಲಿ ಎನ್‌ಡಿಎಗೆ (NDA) ಆರಂಭಿಕ ಮುನ್ನಡೆ ಸಿಕ್ಕಿದೆ.
ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಮಹಾವಿಕಾಸ್ ಅಘಾಡಿ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
Advertisement
ಒಟ್ಟು 288 ಕ್ಷೇತ್ರಗಳು ಮಹಾರಾಷ್ಟ್ರದಲ್ಲಿದ್ದು ಸರಳ ಬಹುಮತ 145 ಸ್ಥಾನಗಳ ಅಗತ್ಯವಿದೆ. ಈ ಬಾರಿ 62.05% ಮತದಾನ ನಡೆದಿದೆ.
Advertisement
ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮತ್ತೆ ಬರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳ್ತಿವೆ. ಆದರೆ, ಕಾಂಗ್ರೆಸ್ ಇದನ್ನು ನಂಬುತ್ತಿಲ್ಲ. ಫೋಟೋ ಫಿನಿಷ್ ಫಲಿತಾಂಶ ಹೊರಬರುವ ನಿರೀಕ್ಷೆಯನ್ನು ಹೊಂದಿದೆ.