ನವದೆಹಲಿ: ಎನ್.ಡಿ.ಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಇಂದು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ಮುಖಂಡ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿಯಾದರು.
ಇಲ್ಲಿನ ಕೃಷ್ಣ ಮೆನನ್ ರಸ್ತೆಯಲ್ಲಿರುವ ವಾಜಪೇಯಿ ನಿವಾಸಕ್ಕೆ ಭೇಟಿ ನೀಡಿ ಪ್ರಧಾನಿ ಹುದ್ದೆಯ ಅಭ್ಯರ್ಥಿಯಾಗಿರುವ ಕೋವಿಂದ್ ಪತ್ನಿ ಸವಿತಾ ಜೊತೆ ವಾಜಪೇಯಿಯವರ ಆಶೀರ್ವಾದ ಪಡೆದರು.
Advertisement
ಕೋವಿಂದ್ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದು ಇದಕ್ಕೂ ಮುನ್ನ ಬಿಜೆಪಿಯ ಹಿರಿಯ ಮುಖಂಡರನ್ನೆಲ್ಲಾ ಭೇಟಿಯಾಗುತ್ತಿದ್ದಾರೆ. ಬುಧವಾರ ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿದ್ದರು. ನಾಳೆ ನಾಮಪತ್ರ ಸಲ್ಲಿಕೆ ಬಳಿಕ ವಿಪಕ್ಷ ಮುಖಂಡರನ್ನೂ ಭೇಟಿಯಾಗಿ ಕೋವಿಂದ್ ಬೆಂಬಲ ಯಾಚಿಸಲಿದ್ದಾರೆ.
Advertisement
ಜೂನ್ 19ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಎನ್.ಡಿ.ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು.
Advertisement
ಇದನ್ನೂ ಓದಿ:ರಾಮನಾಥ್ ಕೋವಿಂದ್‍ಗೆ ಇದೆ ಕಲಬುರಗಿಯ ನಂಟು: ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಮೋದಿ ಹೊಡೆದಿದ್ದು ಹೇಗೆ..?