ನವದೆಹಲಿ: ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ವಿಪಕ್ಷಗಳ ಕೆಲ ನಾಯಕರಿಗೆ ವೈಯಕ್ತಿಕವಾಗಿ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ದ್ರೌಪದಿ ಮುರ್ಮು ಅವರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‍ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳ ಕೆಲ ಪ್ರಮುಖ ನಾಯಕರಿಗೆ ಕರೆ ಮಾಡಿ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ಅಲ್ಲದೇ ದ್ರೌಪದಿ ಅವರಿಗೆ ಸೋನಿಯಾ ಗಾಂಧಿ, ಶರದ್ ಪವಾರ್ ಮತ್ತು ಮಮತಾ ಬ್ಯಾನರ್ಜಿ ಶುಭ ಕೋರಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಜೊತೆ ಆಗಮಿಸಿ ದ್ರೌಪದಿ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಸಂದರ್ಭ ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹ ಹಾಜರಿದ್ದರು.
Advertisement
ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಖಟ್ಟರ್, ಜೈರಾಮ್ ಸಿಂಗ್ ಠಾಕೂರ್, ಪುಷ್ಕರ್ ಸಿಂಗ್ ದಾಮಿ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎನ್‍ಡಿಎ ಬೆಂಬಲಿಸಿರುವ ವೈಎಸ್‍ಆರ್‌ಸಿಪಿ, ಬಿಜೆಡಿ, ಎಐಎಡಿಎಂಕೆ ಪಕ್ಷಗಳ ಮುಖಂಡರೂ ಉಪಸ್ಥಿತರಿದ್ದರು. ಇದನ್ನೂ ಓದಿ: BJP, RSS ನಾಯಕರು ತಮ್ಮ ಮಕ್ಕಳನ್ನು ಯಾಕೆ ಅಗ್ನಿಪಥ್ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ: ರೈತ ಮುಖಂಡರ ಕಿಡಿ