ಲೋಕಸಭೆಯ ಸ್ಪೀಕರ್‌ ಚುನಾವಣೆ – ಎನ್‌ಡಿಎ ಓಂ ಬಿರ್ಲಾ v/s ಇಂಡಿಯಾ ಒಕ್ಕೂಟದ ಸುರೇಶ್‌ ಮಧ್ಯೆ ಫೈಟ್‌

Public TV
2 Min Read
om birla k.suresh lok sabha speaker election

ನವದೆಹಲಿ: 18 ನೇ ಲೋಕಸಭೆಯ ಸ್ಪೀಕರ್‌ಗಾಗಿ ಓಂ ಬಿರ್ಲಾ (Om Birla) ಪರವಾಗಿ ಎನ್‌ಡಿಎ ನಾಯಕರು ಸಹಿ ಹಾಕಿದರು. ಮಂಗಳವಾರ 18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಮತ್ತು ಇಂಡಿಯಾ ಬ್ಲಾಕ್‌ನ ಕೋಡಿಕುನ್ನಿಲ್ ಸುರೇಶ್ (K.Suresh) ನಾಮಪತ್ರ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯದ ನಂತರ, ಲೋಕಸಭೆಯ ಸ್ಪೀಕರ್ (Lok Sabha Speaker Election) ಮತ್ತು ಉಪಸಭಾಪತಿಯನ್ನು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಒಮ್ಮತದ ಮೂಲಕ ಆಯ್ಕೆ ಮಾಡಲಾಗುತಿತ್ತು. ಆದರೆ ಈ ಬಾರಿ ಇಂಡಿಯಾ ಬಣ ಅಭ್ಯರ್ಥಿ ಘೋಷಣೆಯ ನಂತರ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ

NDA Leaders 1

ಜೂನ್ 26 ರಂದು ಲೋಕಸಭೆಯ ಸ್ಪೀಕರ್ ಆಯ್ಕೆ ಚುನಾವಣೆ ನಡೆಯಲಿದೆ. ಜೂನ್ 27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೃಷಿಕ ಮತ್ತು ಸಮಾಜ ಸೇವಕ ಬಿರ್ಲಾ ಅವರು ತಮ್ಮ ವಿದ್ಯಾರ್ಥಿ ದಿನಗಳಿಂದಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 1991 ರಲ್ಲಿ ಭಾರತೀಯ ಯುವ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಮತ್ತು ರಾಷ್ಟ್ರಮಟ್ಟದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

ಬಿರ್ಲಾ ಅವರು ಕೋಟಾ ಕ್ಷೇತ್ರದಿಂದ 17 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಅಲ್ಲಿ ಅವರು ಕಾಂಗ್ರೆಸ್‌ನ ರಾಮನಾರಾಯಣ್ ಮೀನಾ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಕಳೆದ ಲೋಕಸಭೆಗೆ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

new parliament building 2

17ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಬಿರ್ಲಾ ಅವಿರೋಧವಾಗಿ ಆಯ್ಕೆಯಾಗಿದ್ದರು. ಆಗ ಬಿರ್ಲಾ ಅವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದರು. ಇದಕ್ಕೆ ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಬಿಜೆಡಿ ಸೇರಿದಂತೆ ಎಲ್ಲಾ ಪ್ರಮುಖ ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದವು. ವೈಎಸ್‌ಆರ್‌ಸಿಪಿ ಮತ್ತು ಟಿಡಿಪಿ ಕೂಡ ಬಿರ್ಲಾ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದವು. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ 50 ವರ್ಷ – ಕರಾಳ ದಿನಗಳನ್ನು ನೆನೆದ ಪ್ರಧಾನಿ

ಇಂಡಿಯಾ ಬ್ಲಾಕ್ ಅಭ್ಯರ್ಥಿ ಕೆ.ಸುರೇಶ್ ಅವರು 29 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹೆಚ್ಚು ಕಾಲ ಲೋಕಸಭಾ ಸಂಸದರಾಗಿ ಆಯ್ಕೆಯಾದವರ ಪೈಕಿ ಸುರೇಶ್‌ ಕೂಡ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಸುರೇಶ್ ಮೊದಲ ಬಾರಿಗೆ 1989 ರಲ್ಲಿ ಲೋಕಸಭೆಗೆ ಚುನಾಯಿತರಾದರು. ನಂತರ ಅವರು 1991, 1996 ಮತ್ತು 1999 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅಡೂರ್ ಕ್ಷೇತ್ರದಿಂದ ಲೋಕಸಭೆಗೆ ಸತತ ನಾಲ್ಕು ಅವಧಿಗೆ ಗೆದ್ದರು.

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮಾವೆಲಿಕ್ಕಾರ (ಕೇರಳ)ದಿಂದ ಎಂಟನೇ ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಗೆದ್ದರು. ಈ ಹಿಂದೆ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿದ್ದಾರೆ. 17 ನೇ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯ ಸಚೇತಕರಾಗಿದ್ದರು.

Share This Article