LatestLeading NewsMain PostNational

ಉಪರಾಷ್ಟ್ರಪತಿ ಹುದ್ದೆಗೆ NDA ಅಭ್ಯರ್ಥಿ ಧನಕರ್ ನಾಮಪತ್ರ ಸಲ್ಲಿಕೆ- ಮೋದಿ, ಶಾ ಭಾಗಿ

Advertisements

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಬಿಜೆಪಿ ನೇತೃತ್ವದ ಎನ್‍ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವಾಗ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಸುವ ಮೊದಲು ಧನಕರ್ ವಿವಿಧ ಪಕ್ಷದ ಸಂಸದರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿ, ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಧನಕರ್ ವಿರುದ್ಧ ಕಾಂಗ್ರೆಸ್‍ನ ಹಿರಿಯ ನಾಯಕಿ ಮಾರ್ಗರೆಟ್ ಆಳ್ವಾ ಅವರನ್ನು ವಿರೋಧ ಪಕ್ಷವು ಕಣಕ್ಕಿಳಿಸಿದೆ. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – ಎನ್‍ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.

ಇಂದು ಭಾರತದ ಮುಂದಿನ ರಾಷ್ಟ್ರಪತಿಗಾಗಿ ಮತದಾನ ನಡೆಯುತ್ತಿದೆ. ಎನ್‍ಡಿಎಯ ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯದವರಾಗಿರುವುದರಿಂದ ಹಲವಾರು ಎನ್‍ಡಿಎಯೇತರ ಪಕ್ಷಗಳು ಸಹ ಅವರನ್ನು ಬೆಂಬಲಿಸಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಅವರು ಗೆಲುವು ಸಾಧಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಆಯ್ಕೆ

Live Tv

Leave a Reply

Your email address will not be published.

Back to top button