CricketLatestLeading NewsMain PostSports

ಟಿ20 ವಿಶ್ವಕಪ್‌ ಟೀಂ ಪ್ರಕಟ – ಬುಮ್ರಾ ಇನ್‌, ಜಡೇಜಾ ಔಟ್‌

ಮುಂಬೈ: ಟಿ20 ವಿಶ್ವಕಪ್‌ಗೆ (T20 WorldCup) ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಟಿ20 ವಿಶ್ವಕಪ್‌ಗೆ 15 ಆಟಗಾರರನ್ನು ಆಯ್ಕೆ ಮಾಡಿದೆ.

ವೇಗಿಗಳಾದ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಹರ್ಷಲ್ ಪಟೇಲ್ ತಂಡಕ್ಕೆ ಮರಳಿದ್ದಾರೆ. ಆದರೆ ಮೊಣಕಾಲು ಗಾಯದಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಆಲ್‌ರೌಂಡರ್‌ ರವೀಂದ್ರ ಜಡೇಜಾ ಟೀಂ ಇಂಡಿಯಾದಿಂದ (Team India) ಹೊರಗುಳಿದಿದ್ದಾರೆ.

ರೋಹಿತ್‌ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ ಕೆ.ಎಲ್‌.ರಾಹುಲ್‌ ಉಪನಾಯಕನ ಪಟ್ಟ ನೀಡಲಾಗಿದೆ. ಇದನ್ನೂ ಓದಿ: 2 ವರ್ಷ 9 ತಿಂಗಳು 16 ದಿನಗಳ ಬಳಿಕ ಕೊಹ್ಲಿ ಶತಕ – ಟಿ20ಯಲ್ಲಿ ಚೊಚ್ಚಲ 100

ಟೀಂ ಇಂಡಿಯಾ ಸದಸ್ಯರು: ರೋಹಿತ್‌ ಶರ್ಮಾ(ನಾಯಕ) ಕೆ.ಎಲ್‌.ರಾಹುಲ್‌(ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್‌ ಪಂತ್‌ (ವಿಕೆಟ್‌ ಕೀಪರ್‌), ದಿನೇಶ್‌ ಕಾರ್ತಿಕ್‌ (ವಿಕೆಟ್‌ ಕೀಪರ್‌) ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್‌ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್‌ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್‌ ಸಿಂಗ್‌ ಇರಲಿದ್ದಾರೆ. ಇದನ್ನೂ ಓದಿ: ಬೌಲರ್‌ಗೆ ಬ್ಯಾಟ್‍ನಲ್ಲಿ ಹೊಡೆಯಲು ಮುಂದಾದ ಆಸಿಫ್ ಅಲಿ – ಜೋರಾದ #BanAsifAli ಕೂಗು

ಹೆಚ್ಚುವರಿ ಆಟಗಾರರಾಗಿ ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್‌ ಇರಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

Live Tv

Leave a Reply

Your email address will not be published.

Back to top button