ಮುಂಬೈ: ಟೀಂ ಇಂಡಿಯಾ ಅಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಸುಮಾರು 60 ದಿನಗಳ ಬಳಿಕ ಬೌಲಿಂಗ್ ಅಭ್ಯಾಸ ನಡೆಸಿದ್ದು, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಕಮ್‍ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಬಹುದಿನಗಳ ಬಳಿಕ ಮತ್ತೆ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆಸೀಸ್ ವಿರುದ್ಧದ ಏಕದಿನ ಟೂರ್ನಿಗೆ ಬಿಸಿಸಿಐ ತಂಡವನ್ನು ಆಯ್ಕೆ ಮಾಡಬೇಕಿದ್ದು ಸ್ಥಾನ ಸಿಗುವ ಸಾಧ್ಯತೆಯಿದೆ.
Advertisement
Focused and determined! Feels good to be bowling after 60 days, on my road to recovery ???????????????? pic.twitter.com/D5moHZKVfd
— hardik pandya (@hardikpandya7) November 19, 2018
Advertisement
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಹಾರ್ದಿಕ್ ಪಾಂಡ್ಯ 2019 ಜನವರಿಯಲ್ಲಿ ಆರಂಭವಾಗಲಿರುವ ಆಸೀಸ್ ಏಕದಿನ ಟೂರ್ನಿಯಲ್ಲಿ ಕಮ್‍ಬ್ಯಾಕ್ ಮಾಡಲು ಶ್ರಮವಹಿಸುತ್ತಿದ್ದೇನೆ. ಇದಕ್ಕಾಗಿ ಫಿಟ್ನೆಸ್ ಕಾಯ್ದುಕೊಳ್ಳಲು ಶ್ರಮವಹಿಸುತ್ತಿದ್ದು, ಮುಂಬೈನಲ್ಲಿ ಕಠಿಣ ಬೌಲಿಂಗ್ ಸೆಷನ್ಸ್‍ಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
Advertisement
2016 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ ಹಾರ್ದಿಕ್ ಪಾಂಡ್ಯ, ಉತ್ತಮ ಪ್ರದರ್ಶನದ ನೀಡುವ ಮೂಲಕ ನಿರಂತರವಾಗಿ ತಂಡದ ಸದಸ್ಯರಾಗಿದ್ದರು. 2019ರ ಮೇ-ಜುಲೈ ತಿಂಗಳಲ್ಲಿ ನಡೆಯಲಿರುವ ವಿಶ್ವಕಪ್ ಸದ್ಯ ಹಾರ್ದಿಕ್ ಪಾಂಡ್ಯರ ಬಹುಮುಖ್ಯ ಗುರಿಯಾಗಿದೆ. ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿಯುತ್ತಿದಂತೆ ಆ ಸ್ಥಾನಕ್ಕೆ ಹಾರ್ದಿಕ್ ಸಹೋದರ ಕೃಣಾಲ್ ಪಾಂಡ್ಯ ಆಯ್ಕೆ ಆಗಿದ್ದರು.
Advertisement
Finding my form with the bat, slowly but surely ???? pic.twitter.com/SjtAI7k8g5
— hardik pandya (@hardikpandya7) November 20, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv