ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಹೋರಾಟ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಈ ವರೆಗೆ 115 ಮಂದಿ ಜೀವ ಕಳೆದುಕೊಂಡಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದು, ದೇಶದಲ್ಲಿ ಕರ್ಫ್ಯೂ ಹೇರಲಾಗಿದೆ. ಇದರಿಂದ ಭೀತಿ ಹೆಚ್ಚಾಗಿದ್ದು, ಭಾರತೀಯ ವಿದ್ಯಾರ್ಥಿಗಳು (Indian Students) ತವರಿಗೆ ವಾಪಸ್ಸಾಗುತ್ತಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಬಿಟ್ಟು ಸಿಎಂ ಬೇರೆ ವಿಷಯ ಮಾತಾಡುತ್ತಾರೆ, ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್.ಅಶೋಕ್
Advertisement
ಬಾಂಗ್ಲಾದಲ್ಲಿ ನೆಲೆಸಿರುವ 15 ಸಾವಿರ ಭಾರತೀಯರಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಗಳೇ ಇದ್ದಾರೆ ಎನ್ನಲಾಗಿದೆ. ಅಲ್ಲಿ ನೆಲೆಸಿರುವ 1000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ. 778 ವಿದ್ಯಾರ್ಥಿಗಳು ಬಂದರುಗಳ ಮೂಲಕ ಹಾಗೂ ಸುಮಾರು 200 ವಿದ್ಯಾರ್ಥಿಗಳು ಸಾಮಾನ್ಯ ವಿಮಾನ ಮೂಲಕ ಭಾರತಕ್ಕೆ ಮರಳಿದ್ದಾರೆ. ಬಾಂಗ್ಲಾದೇಶದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ (Bangladesh Universities) ಇನ್ನೂ 4000ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
Advertisement
Advertisement
ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿವೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: NEET-UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ – ಮಾಸ್ಟರ್ ಮೈಂಡ್, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್
Advertisement
ಹಿಂಸಾಚಾರಕ್ಕೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ಪ್ರಧಾನಿಗಳು ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಶುಕ್ರವಾರವೂ ಬಾಂಗ್ಲಾದೇಶದಲ್ಲಿ ಘರ್ಷಣೆಗಳು ಮತ್ತು ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಪ್ರತಿಭಟನಾ ನಿರತರು ನರಸಿಂಗಡಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ನೂರಾರು ಕೈದಿಗಳನ್ನು ಬಿಡುಗಡೆ ಮಾಡಿದ್ದಾರೆ. ನಂತರ ಜೈಲಿಗೆ ಬೆಂಕಿ ಹಚ್ಚಿದ್ದಾರೆ. ಗಲಭೆಯ ಬಿಸಿ ಸಾಮಾನ್ಯ ಜನರ ಬದುಕಿಗೂ ತಟ್ಟಿದೆ. ದೇಶಾದ್ಯಂತ ಹರಡಿರುವ ಅಶಾಂತಿಯನ್ನು ತಡೆಯಲು ಪೊಲೀಸರು ಕೂಡ ವಿಫಲವಾಗಿದ್ದಾರೆ. ಇದನ್ನೂ ಓದಿ: ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಭೂಪ!
ಪರಿಸ್ಥಿತಿ ಕೈಮೀರಿದ್ದರಿಂದಾಗಿ ದೇಶದಲ್ಲಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಎಲ್ಲ ವಿದೇಶಿ ಪ್ರಯಾಣಗಳನ್ನು ರದ್ದುಗೊಳಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಶ್ರೀಗಳು ಬಂದಾಗ ಬುದ್ಧಿ ಅಂತೀವಿ, ತಳಸಮುದಾಯವರು ಬುದ್ಧಿವಂತರಾದ್ರೂ ಏಕವಚನದಲ್ಲಿ ಮಾತಾಡ್ತಿವಿ: ಸಿಎಂ