ಕಾಬೂಲ್: ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ (Western Afghanistan) ಶನಿವಾರ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ (Earthquak) ಕನಿಷ್ಠ 120 ಮಂದಿ ಸಾವನ್ನಪ್ಪಿದ್ದು, 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಭಾಗದ ಅತಿ ದೊಡ್ಡ ನಗರವಾದ ಹೆರಾತ್‌ನ (Herat Northwest ) ವಾಯವ್ಯ ಭಾಗದ 40 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸಮೀಕ್ಷಾ ಕೇಂದ್ರ ತಿಳಿಸಿದೆ. ರಿಕ್ಟರ್ ಮಾಪನದಲ್ಲಿ ಇದು 6.3 ತೀವ್ರತೆ ದಾಖಲಾಗಿದೆ. ಇದರ ನಂತರವೂ 4.3 ಮತ್ತು 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ
Advertisement
Advertisement
ಗಾಯಗೊಂಡ 1 ಸಾವಿರಕ್ಕೂ ಅಧಿಕ ಜನರಲ್ಲಿ ಮಹಿಳೆಯರು, ಮಕ್ಕಳು ಹಾಗೂ ವೃದ್ಧರೂ ಇದ್ದಾರೆ. ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭೂಕಂಪನದ ತೀವ್ರತೆಗೆ ಅನೇಕ ಕಟ್ಟಡಗಳು ಕುಸಿದಿದ್ದು, ಅವುಗಳ ಅವಶೇಷಗಳ ಅಡಿ ಅನೇಕ ಮಂದಿ ಸಿಲುಕಿಕೊಂಡಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಇದನ್ನೂ ಓದಿ: 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್
Advertisement
Advertisement
ಜನರು ಅವಶೇಷಗಳ ಅಡಿ ಹೂತು ಹೋಗಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದ್ದು, ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೆರಾತ್ ಪ್ರಾಂತ್ಯದ ಸಾರ್ವಜನಿಕ ಆರೋಗ್ಯ ನಿರ್ದೇಶಕ ಮೊಹಮ್ಮದ್ ತಾಲೆಬ್ ಶಾಹಿದಿ ತಿಳಿಸಿದ್ದಾರೆ.
Web Stories